ಹೊಸನಗರ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ವ್ಯಾಸ ಮಹರ್ಷಿ ಗುರುಕುಲ ಬಟ್ಟೆಮಲ್ಲಪ್ಪ ಇಲ್ಲಿ ಜೂನ್ 25ರ ಶನಿವಾರ ಬೆಳಗ್ಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಶ್ರೀ ಬಸವನಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್, ಶ್ರೀ ವ್ಯಾಸ ಮಹರ್ಷಿ ಗುರುಕುಲ, ಬಟ್ಟೆಮಲ್ಲಪ್ಪ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹರಿದ್ರಾವತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಸ್ಥಳೀಯರ ಸಹಕಾರದೊಂದಿಗೆ ರಕ್ತದಾನ ಶಿಬಿರವನ್ನು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಇಲ್ಲಿನ ರಕ್ತ ನಿಧಿ ಸಹಯೋಗದಲ್ಲಿ ಏರ್ಪಡಿಸಲಾಗಿದೆ.
ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ. ಸಾರ್ವಜನಿಕರು, ಸಂಘ – ಸಂಸ್ಥೆ ಪದಾಧಿಕಾರಿಗಳು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿಕೊಡುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಮಂಜುನಾಥ್ ಎಸ್. ಬ್ಯಾಣದ ಮೊ. 8152941498 ಹಾಗೂ ಪ್ರಭಾಕರ್ ಪ್ರಾ.ಆ. ಕೇಂದ್ರ ಹರಿದ್ರಾವತಿ ಮೊ. 944976101 ಇವರಿಗೆ ಸಂಪರ್ಕಿಸಬಹುದಾಗಿದೆ.
Related