ಜೋಗ: ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ !

0
1646

ಸಾಗರ: ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪದ ಮರವೊಂದಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಜೋಗದ ನಿವಾಸಿ ಗಂಗಾಧರ್ (38) ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದು, ಆತ್ಮಹತ್ಯೆಗೆ ಶರಣಾದಂತ ಗಂಗಾಧರ್ ಮದ್ಯ ವ್ಯಸನಿಯಾಗಿದ್ದು, ನಿನ್ನೆ ಭಾನುವಾರ ರಾತ್ರಿ ವಿಪರೀತ ಕುಡಿದು ಬಂದು ಪತ್ನಿ, ಮಕ್ಕಳ ಮೇಲೆ ಹಲ್ಲೆ ಕೂಡ ನಡೆಸಿದ್ದರು. ಈ ಬಳಿಕ ಮನೆಯ ಸಮೀಪದ ಮರದ ಬಳಿ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ನಿರ್ಮಲಾ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here