ಜ್ಯೂಸ್’ನಲ್ಲಿ ಮತ್ತಿನ ಔಷಧಿ ಹಾಕಿ ಅತ್ಯಾಚಾರ_ಆರೋಪ: ಸಾಗರ ಠಾಣೆ ಸಿಪಿಐ ವಿರುದ್ಧ ಕೇಸ್ ದಾಖಲು..!

0
1775

ಸಾಗರ : ಜ್ಯೂಸ್ ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಚಾರವೆಸಗಿರುವ ಕುರಿತು ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ದೂರಿನಲ್ಲಿ ಸಂತ್ರಸ್ತೆ ತನ್ನ ಮೇಲೆ ನಿರಂತರವಾಗಿ ನಾಲ್ಕು ವರ್ಷಗಳ ಅತ್ಯಾಚಾರವೆಸಗಿರುವ ಕುರಿತು ಆರೋಪಿಸಲಾಗಿದೆ.

ಮಹಿಳೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಠಾಣೆಗೆ ಬಂದಿದ್ದರು. ಮಹಿಳೆಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ ಅಶೋಕ್ ಕುಮಾರ್, ನಂತರದಲ್ಲಿ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಾರೆ. ಒಮ್ಮೆ ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದು, ತನ್ನ ಅಶ್ಲೀಲ, ಪೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಸುಮಾರು 4 ವರ್ಷಗಳ ಕಾಲ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಅತ್ಯಾಚಾರವೆಸಗುವುದಾಗಿಯೂ ಹೆದರಿಸಿದ್ದಾರೆ. ತನಗೆ ದೂರು ನೀಡದಂತೆ ಕೊಲೆ ಬೆದರಿಕೆಯೊಡ್ಡಿದ್ದಾರೆಂದು ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಐಪಿಸಿ ಕಲಂ 354(ಎ), 376 (ಸಿ), 417, 504, 506ರ ಅಡಿ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here