ಟೆಂಟ್‌ನಲ್ಲಿ 70 ಕುರಿಗಳು ಸಾವು ! ಟ್ವೀಟ್ ಮೂಲಕ ಸಿದ್ದರಾಮಯ್ಯ ಆಕ್ರೋಶ

0
701

ಶಿವಮೊಗ್ಗ: ನಗರದ ಪೆಸಿಟ್ ಕಾಲೇಜಿನ ಮುಂಭಾಗದಲ್ಲಿ ಚಿಕ್ಕೋಡಿ ಭಾಗದ ಸಂಚಾರಿ ಕುರುಬರು ಹಾಕಿರುವ ಟೆಂಟ್‌ನಲ್ಲಿ 70 ಕುರಿಗಳು ಸಾವನ್ನಪ್ಪಿವೆ.

ಸಾವಿಗೆ ಕಾರಣ ತಿಳಿದುಬಂದಿಲ್ಲ. ಘಟನೆ ನಡೆದು ಎರಡು ದಿನಗಳಾದರೂ ಪಶು ಅಧಿಕಾರಿಗಳಾಗಲಿ ಯಾರೂ ಇದುವರೆಗೂ ಸ್ಪಂದಿಸಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕ ಕಾರಣ ಗೊತ್ತಾಗಲಿದೆ ಹಾಲುಮತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಡಾ.ಪ್ರಶಾಂತ್ ‘ಸರ್ಕಾರಗಳು ಈ ಕುರಿಗಾಯಿಗಳನ್ನು ಗಮನಿಸಿ ಸತ್ತ ಕುರಿಗಳಿಗೆ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಮತ್ತು ಕುರಿಗಳಿಗೆ ಎಲ್ಲಾ ಪಶು ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ನೀಡಬೇಕು. ಕುರಿಗಾಹಿಗಳಿಗೂ ರಕ್ಷಣೆ ಒದಗಿಸಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್:

ಈ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು ಬಾರಿ ಸಂಚಲನ ಮೂಡಿಸಿದೆ. ತಮ್ಮ ಸರ್ಕಾರ ಇದ್ದ ಅವಧಿಯಲ್ಲಿ ಇಂತವರ ನೆರವಿಗಾಯೇ ಅನುಗ್ರಹ ಎಂಬ ಯೋಜನೆಯನ್ನು ಜಾರಿಗೆ ತರಲಾಗಿತ್ತು.‌ ಆದರೆ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿದ್ದಾರೆ.

ಕುರಿಗಾಹಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಹಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಅನುಗ್ರಹ ಯೋಜನೆಗೆ ಹಣ ಒದಗಿಸಿ, ಪಶುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಟ್ವೀಟ್‌ ಮಾಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here