ಟೋಕಿಯೋ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಶಿವಮೊಗ್ಗ ಮೂಲದ ಸುಹಾನ್!

0
1203

ಶಿವಮೊಗ್ಗ: ಟೋಕಿಯೋ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ, ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಬೆಳ್ಳಿ ಪದಕ ಗೆದ್ದಿದ್ದಾರೆ.

ನಿನ್ನೆ ನಡೆದ ಬ್ಯಾಡ್ಮಿಂಟನ್ ಫೈನಲ್ಸ್ ನಲ್ಲಿ ಫ್ರಾನ್ಸ್ ನ ಲೂಕಸ್ ಮಜುರ್ ವಿರುದ್ಧ ಸೋಲೊಪ್ಪಿಕೊಂಡಿದ್ದು, ಬೆಳ್ಳಿಪದಕಕ್ಕೆ ಮುತ್ತಿಟ್ಟಿದ್ದಾರೆ.

ಈ ಮೂಲಕ ಭಾರತದ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಭಾರತಕ್ಕೆ 4 ಚಿನ್ನ,7 ಬೆಳ್ಳಿ, 7 ಕಂಚಿನ ಪದಕ ಸಿಕ್ಕಿವೆ. ಫ್ರಾನ್ಸ್ ನ ಲೂಕಸ್ ವಿರುದ್ಧ ಮೊದಲ ಸೆಟ್ ನಲ್ಲಿ 21-15 ಅಂತರದಲ್ಲಿ ಗೆಲುವು ಸಾಧಿಸಿದ್ದ ಸುಹಾಸ್, ಎರಡು ಹಾಗೂ ಮೂರನೇ ಸೆಟ್‌ನಲ್ಲಿ ಹಿನ್ನೆಡೆ ಸಾಧಿಸುವ ಮೂಲಕ ಬೆಳ್ಳಿ ಪದಕ ಪಡೆದಿದ್ದಾರೆ.

ಪ್ರಮೋದ್ ಭಗತ್ ಜಪಾನ್‌ನ ಡೈಸುಕೆ ಫುಜಿಹಾರ ಅವರನ್ನು 21-11, 21-16 ರಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ಸುಹಾಸ್ ಯತಿರಾಜ್ 2007 ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ.

ಹಾಸನದಲ್ಲಿ ಬಾಲ್ಯ ಹಾಗೂ ಶಿಕ್ಷಣ ಪೂರೈಸಿದ ಸುಹಾಸ್ ಯತಿರಾಜ್ ತಂದೆ ಸರ್ಕಾರಿ ಉದ್ಯೋಗಿಯಾದ ಕಾರಣ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಸದ್ಯ ಉತ್ತರಪ್ರದೇಶದ ನೋಯ್ಡಾ ಡಿಸಿಯಾಗಿ ಸುಹಾಸ್ ಸೇವೆ ಸಲ್ಲಿಸುತ್ತಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here