ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನೊಬೆಲ್ ಪ್ರಶಸ್ತಿ ನೀಡಲು ಆಗ್ರಹ

0
198

ಚಿಕ್ಕಮಗಳೂರು: ತಮ್ಮ ಸಾಮಾಜಿಕ ಧಾರ್ಮಿಕ ಕಾರ್ಯಗಳ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ವಂದೇ ಮಾತರಂ ಸಂಘದ ರಾಜ್ಯಾಧ್ಯಕ್ಷ ಪ್ರಶಾಂತ್ ಚಿಪ್ರಗುತ್ತಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ‘ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಆರೋಗ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ತೋರಿಸಿದ ಸೇವೆ ಅಪಾರ. ಅವರ ವ್ಯಕ್ತಿತ್ವವು ಪ್ರತಿಯೋರ್ವರನ್ನು ಸೂಜಿಗಲ್ಲಿನಂತೆ ಸೆಳೆಯುವಂತದ್ದಾಗಿದೆ. ನಡೆ, ವಿನಯತೆಗೆ ಶ್ರೇಷ್ಠರಿಂದಲೇ ಜನಮನ್ನಣೆ ಗಳಿಸಿದ ಹೆಗ್ಗಡೆಯವರು 1982ರಲ್ಲಿ ಭಗವಾನ್ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಪ್ರತಿ 12 ವರ್ಷಗಳಿಗೊಮ್ಮೆ ಮೂರು ಮಹಾಮಸ್ತಕಾಭಿಷೇಕ, ಮಹಾನಡಾವಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಉಜಿರೆ, ಮಂಗಳೂರು, ಬೆಂಗಳೂರು ಮೈಸೂರು ಹಾಗೂ ದಾರವಾಡದಲ್ಲಿ ಹಲವು ಶಿಕ್ಷಣ ಸಂಸ್ಥೆಗಳು, ಕಲ್ಯಾಣ ಮಂಟಪಗಳು, ಸ್ವ ಉದ್ಯೋಗ ತರಬೇತಿ ಕೇಂದ್ರಗಳು ಇತ್ಯಾದಿ ಹೆಗ್ಗಡೆಯವರು ಅನುಷ್ಠಾನಗೊಳಿಸಿದ ಸೇವಾ ಕಾರ್ಯಗಳಾಗಿವೆ.

ಡಾ. ವೀರೇಂದ್ರ ಹೆಗ್ಗಡೆಯವರು ನುಡಿದಂತೆ ನಡೆಯುವ, ಸಮಾಜಕ್ಕಾಗಿ ತ್ಯಾಗ ಹಾಗೂ ತಪಸ್ಸಿನ ಜೀವನ ನಡೆಸಿದ ಮಹಾನ್ ವ್ಯಕ್ತಿಯಾಗಿದ್ದು ಇಂತಹವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here