ತಳಿಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಟಿ.ಎಲ್. ಅರುಣ್ ಅವಿರೋಧ ಆಯ್ಕೆ

0
129

ಮೂಡಿಗೆರೆ: ತಾಲ್ಲೂಕಿನ ತಳಿಹಳ್ಳ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಟಿ. ಎಲ್ ಅರುಣ್‍ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯಾಗಿ ಯಾರೊಬ್ಬರು ನಾಮಪತ್ರ ಸಲ್ಲಿಸದ ಹಿನ್ನಲೆ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಾರಾನಾಥ್ ಘೋಷಣೆ ಮಾಡಿದರು.

ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ತಳಿಹಳ್ಳ ಗ್ರಾಮಪಂಚಾಯಿತಿಗೆ ಕಳೆದ 2 ವರ್ಷದ ಅವಧಿಯಲ್ಲಿ ಸುಮಾರು 3 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ನಡೆಸಲಾಗಿದೆ. ಗ್ರಾಮದೊಳಗೆ ಕಾಂಕ್ರಿಟ್ ರಸ್ತೆ, ದೇವಾಲಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.

ಇಳೆಹೊಳೆ ಕಾಲೋನಿಗೆ ರೂ. 25 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಅನುದಾನ. ಮಾರಿಗುಡಿಯಿಂದ ಕಟ್ರುಮನೆ ರಸ್ತೆ ಅಭಿವೃದ್ಧಿ, ಸೇರಿದಂತೆ ಕ್ಷೇತ್ರದ ಉದ್ದಗಲಕ್ಕೂ ಅಭಿವೃದ್ಧಿ ಕೈಗೊಳ್ಳಲಾಗಿದೆ. ಯಾವುದೇ ಕ್ಷೇತ್ರವನ್ನು ಕಡೆಗಣಿಸಿಲ್ಲ ಎಂದು ತಿಳಿಸಿದರು.

ತಳಿಹಳ್ಳ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಅರುಣ್‍ಕುಮಾರ್ ಅವಿರೋಧವಾಗಿ ಆಯ್ಕೆಗೊಂಡಿದ್ದು ಪಂಚಾಯಿತಿಯನ್ನು ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸಲಿ. ಗ್ರಾಮಪಂಚಾಯಿತಿ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಿ ಎಂದು ಸಲಹೆ ನೀಡಿದರು.

ನೂತನ ಉಪಾಧ್ಯಕ್ಷ ಟಿ. ಎಲ್. ಅರುಣ್‍ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಹಾಗೂ ಬೀದಿ ದೀಪದ ಸಮಸ್ಯೆ ಜತಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿದ್ದು ಅದಕ್ಕೆ ಆದ್ಯತೆ ನೀಡಲಾಗುವುದು. ಎಲ್ಲಾ ಸದಸ್ಯರು, ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆಯುವ ಮೂಲಕ ಎಲ್ಲರ ಸಹಕಾರೊಂದಿಗೆ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಳಿಹಳ್ಳ ಗ್ರಾಮಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಸದಸ್ಯರಾದ ಸುಧಾ, ಶಾಂತಾ, ವೆಂಕಟೇಶ್, ಸುರೇಶ್, ಸದಾಶಿವ, ಮುಖಂಡರಾದ ವೆಂಕಟೇಶ್, ಕೃಷ್ಣೇಗೌಡ, ಬೈಗೂರು ನಾಗೇಶ್, ಮೈಲಿಮನೆ ಪೂರ್ಣೇಶ್, ನಾಗೇಶ್, ಕೃಷ್ಣಮೂರ್ತಿ, ನಾರಾಯಣಚಾರಿ, ಮನು, ಪಿಡಿಒ ರಾಜೇಶ್ವರಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here