Home Crime News ತೀರ್ಥಹಳ್ಳಿ ಬಸ್ ನಿಲ್ದಾಣದ ಶೌಚಾಲಯ ನೋಡಿಕೊಳ್ತಿದ್ದ ದಲಿತನ ಮೇಲೆ ನಡೆಯಿತೆ ಹಲ್ಲೆ !?
ತೀರ್ಥಹಳ್ಳಿ : ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿರುವ ಶೌಚಾಲಯವನ್ನು ನೋಡಿಕೊಳ್ಳುತ್ತಿದ್ದ ದಲಿತ ಯುವಕನೊಬ್ಬನ ಮೇಲೆ ಏಳೆಂಟು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಾಗುತ್ತಿದ್ದು ಅದಕ್ಕೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾದಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ ದೃಶ್ಯ ಸೆರೆಯಾಗಿದೆ.
ಇನ್ನು ಹಲ್ಲೆಗೊಳಗಾದ ವ್ಯಕ್ತಿ ಹೆದರಿ ದೂರು ನೀಡುತ್ತಿಲ್ಲವೆಂದು ಹೇಳಲಾಗುತ್ತಿದೆ. ಯುವಕ ಅಲ್ಲಿದ್ದವರ ಬಳಿ ಹೇಳಿಕೊಂಡಿರುವ ಪ್ರಕಾರ, ಆತ ಅಲ್ಲಿಗೆ ಬಂದು ಶೌಚಕ್ಕೆ ಮುಗಿಸಿದವರ ಬಳಿ 2 ರೂಪಾಯಿ ಕೇಳಿದ್ದಕ್ಕೆ ಈ ಹಲ್ಲೆ ನಡೆದಿದೆಯಂತೆ. ಈ ಸಂಬಂಧ ನಿನ್ನೆ ಸಹ ಹಲ್ಲೆ ನಡೆಸಿದ್ದು ಅಲ್ಲದೆ ಇವತ್ತು ಕೂಡ ಬೆಳಗ್ಗೆ ಗುಂಪುಕಟ್ಟಿಕೊಂಡು ಬಂದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ದಲಿತ ಯುವಕ ಹೆದರಿದ್ದು, ದೂರು ಕೊಡಲು ಮುಂದಾಗುತ್ತಿಲ್ಲ ಎಂದು ಹೇಳಲಾಗುತ್ತಿದ್ದು ಅಕ್ಕಪಕ್ಕದವರು ಹಾಗೂ ಸ್ಥಳೀಯ ವ್ಯಾಪಾರಸ್ಥರು ಸ್ಥಳೀಯ ಶಾಸಕರು ಗೃಹಸಚಿವರೂ ಆಗಿರುವ ಆರಗ ಜ್ಞಾನೇಂದ್ರರವರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.
Related