ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು !

0
1720

ತೀರ್ಥಹಳ್ಳಿ: ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ.

ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್ (19) ಹಾಗೂ ಸೊನಲೆಯ ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ.

ನಿನ್ನೆ ಮಧ್ಯಾಹ್ನ ಇಬ್ಬರೂ ತುಂಗಾ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ ಇಬ್ಬರ ಯೂನಿಫಾರ್ಮ್ ಮೊಬೈಲ್ ಪತ್ತೆಯಾಗಿತ್ತು.

ನಿನ್ನೆಯಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಇಂದು ಅಗ್ನಿ ಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರ ಸಹಕಾರದೊಂದಿಗೆ ಇಂದು ಶವ ನದಿಯಿಂದ ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಜಾಹಿರಾತು

LEAVE A REPLY

Please enter your comment!
Please enter your name here