ಮೂಡಿಗೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಿಳಗಲಿ ಗ್ರಾಮದಲ್ಲಿ ನಡೆದಿದೆ.
ಬಿಳಗಲಿ ಗ್ರಾಮದ ಸಂದೀಪ್ ಗೌಡ ಎಂಬುವವರ ಮನೆಯಲ್ಲಿ ದನ ಮೇಯಿಸಿಕೊಂಡಿದ್ದ ತಿಮ್ಮಪ್ಪ (55) ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಕಾರ್ಮಿಕ. ಈ ವೇಳೆ ಎರಡು ಹಸುಗಳೂ ಸಹ ವಿದ್ಯುತ್ ತಂತಿ ಸ್ಪರ್ಶಿಸಿ ಸತ್ತಿವೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ದನ ಮೇಯಿಸಲು ತೆರಳುತ್ತಿದ್ದ ವೇಳೆ ನೆಲದ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ತಿಮ್ಮಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಾಳೂರು ಪೊಲೀಸರು, ಮೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Related