ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಮಹಿಳೆ ಸಾವು !

0
725

ಮೂಡಿಗೆರೆ: ನಾಗರಹಾವು ಕಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾಲುಮರದಲ್ಲಿ ನಡೆದಿದೆ.

ಶಾರದಾ (60) ಮೃತ ದುರ್ದೈವಿಯಾಗಿದ್ದು, ಮನೆಯ ಸಮೀಪದ ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದಿದೆ. ಕೂಡಲೇ ಸ್ಥಳದಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಾರದಾ ಸಾವನ್ನಪ್ಪಿದ್ದಾರೆ.

ಈ ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here