ತೌಕ್ತೆ ಚಂಡಮಾರುತದ ಎಫೆಕ್ಟ್: ಮಲೆನಾಡಿನಾದ್ಯಂತ ಜಿಟಿಜಿಟಿ ಮಳೆ

0
673

ಶಿವಮೊಗ್ಗ/ಚಿಕ್ಕಮಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಎದ್ದಿರುವಂತ ತೌಕ್ತೆ ಚಂಡಮಾರುತದ ಎಫೆಕ್ಟ್ ನಿಂದಾಗಿ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ‌.

ಮಲೆನಾಡು ಜಿಲ್ಲೆಯಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿಯೂ ತಡರಾತ್ರಿಯಿಂದಲೇ ಮಳೆ ಶುರುವಾಗಿದ್ದು, ಮತ್ತೆ ಎಲ್ಲಿ ಮೂರು ವರ್ಷಗಳಿಂದ ನಡೆಯುತ್ತಿರುವಂತ ಮಳೆಯ ಅವಾಂತರ ಈ ವರ್ಷ ಕೂಡ ಆಗಿಬಿಡುತ್ತದೋ ಎನ್ನುವ ಆತಂಕವನ್ನು ಜನರಲ್ಲಿ ಮೂಡಿಸಿದೆ.

ಚಂಡಮಾರುತದ ಬೆನ್ನಲ್ಲೇ ಅವಧಿಗೆ ಮುನ್ನವೇ ಮುಂಗಾರು ಮಳೆ ಪ್ರವೇಶಿಸಲಿದೆ ಎಂಬ ಹವಾಮಾನ ಇಲಾಖೆಯ ಸೂಚನೆಯ ಬೆನ್ನಲ್ಲೇ ಭಾರೀ ಮಳೆಯಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಜೊತೆಗೆ ನೈಋತ್ಯ ಮಾರುತ ಪ್ರಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಳೆ ಜೋರಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ ತಾಲೂಕಿನಲ್ಲಿ ರಾತ್ರಿಯಿಂದಲೇ ಬಿರುಗಾಳಿ ಸಹಿತ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ.

ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಎರಡೂ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ಸಹ ನೀಡಿದೆ.

ಜಾಹಿರಾತು

LEAVE A REPLY

Please enter your comment!
Please enter your name here