ದತ್ತಪೀಠದ ಹೋಮ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಾಹಾರ ಸೇವನೆ ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

0
338

ಚಿಕ್ಕಮಗಳೂರು: ಬಾಬಾ ಬುಡನ್‌ಗಿರಿಯಲ್ಲಿರುವ ವಿವಾದಿತ ದತ್ತಪೀಠ ಪ್ರದೇಶದ ಹೋಮ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಹಾರ ತಯಾರಿಸಿ ಸೇವನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದ್ದು, ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸದೂಟ ಮಾಡಲಾಗಿದ್ದು. ಅಲ್ಲೆ ಸಮೀಪದ ವಿವಾದಿತ ಗೋರಿಗೆ ಬಳಿ ಕಿಡಿಗೇಡಿಗಳು ಈ ಮಾಂಸದೂಟ ಅರ್ಪಿಸಿ ಊಟ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಘಟನೆಗೆ ಮುಜರಾಯಿ ಇಲಾಖೆ ಅಧಿಕಾರಿಗಳೇ ಕಾರಣ ಅಂತ ಆರೋಪಿಸಿದ್ದಾರೆ.

ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ ಅಲ್ಲಿಯೇ ಮಾಂಸಹಾರ ಸೇವನೆ ಮಾಡುತ್ತಿರುವತಂಹ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

ಇದಕ್ಕೆ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ಸೇವನೆ ಮಾಡುತ್ತಿರುವುದು ಸಹ ಕಂಡು ಬಂದಿದ್ದು. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಮಾಂಸ ಬೇಯಿಸುವ ಮೂಲಕ ದತ್ತಪೀಠ ಅಪವಿತ್ರ ಮಾಡಲಾಗಿದೆ ಅಂತ ಭಜರಂಗದಳದ ಪ್ರಾಂತ್ಯ ಸಂಚಾಲಕ ರಘು ಸಕಲೇಶಪುರ ದೂರಿದ್ದಾರೆ.

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ, ಬೇರೆ ಸಮಯದಲ್ಲಿ ಮಾಂಸದ ಹೊಗೆ ಆಗಿದೆ. ಮುಂದಿನ ದತ್ತ ಜಯಂತಿಯ ಹೋಮವನ್ನು ತಾತ್ಕಾಲಿಕ ಶೆಡ್ ನಲ್ಲಿ ಮಾಡುವುದಿಲ್ಲ, ಬದಲಾಗಿ ಗುಹೆ ಸಮೀಪದ ತುಳಸಿಕಟ್ಟೆ ಬಳಿ ಹೋಮ ಮಾಡುತ್ತೇವೆ ಎಂದಿದ್ದಾರೆ.

ಇನ್ನು ಈ ಘಟನೆಯನ್ನು ಖಂಡಿಸಿರುವ ಬಜರಂಗದಳ, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ. ದತ್ತಪೀಠದ ಅಪವಿತ್ರಗೊಳಿಸಿರುವವರ ವಿರುದ್ದ ಪ್ರಕರಣಕ್ಕೆ ಒತ್ತಾಯಿಸಿದ್ದು, ಯಾವುದೇ ವಿರೋಧವನ್ನು ಎದುರಿಸಲು ಬಜರಂಗದಳ ಸನ್ನದ್ಧವಾಗಿದೆ ಎಂದಿದೆ. ಕೋರ್ಟ್‌ ಆದೇಶ ಉಲ್ಲಂಘನೆ ಆಗಿದ್ದರೂ ಕ್ರಮಕೈಗೊಳ್ಳುತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದು ಅಕ್ಷಮ್ಯ, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು

ಇನ್ನು ಘಟನೆ ಕುರಿತಂತೆ ಕಲಬುರಗಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರು ದತ್ತ ಪೀಠದ ಘೋರಿಗಳಿಗೆ ಮಾಂಸ ನೈವೇದ್ಯ ಮಾಡಿದ್ದು ಅಕ್ಷಮ್ಯ ಅಪರಾಧ. ಇದರ ಹಿಂದೆ ಯಾರಿದ್ದಾರೋ ಕ್ರಮ ಆಗಬೇಕು ಎಂದಿದ್ದಾರೆ.

“ನಿನ್ನೆ ರಾತ್ರಿಯೇ ನನ್ನ ಗಮನಕ್ಕೆ ಬಂದಿದೆ”

ನಿನ್ನೆ ರಾತ್ರಿಯೇ ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸ್ಪಷ್ಟನೆಗಾಗಿ ಜಿಲ್ಲಾಧಿಕಾರಿಗೆ ವಾಟ್ಸಪ್ ಗೆ ಸಂದೇಶ ಕಳುಹಿಸಿದ್ದೆ. 300 ಮೀಟರ್ ವ್ಯಾಪ್ತಿಯಲ್ಲಿ ಪ್ರಾಣಿ ಬಲಿ ನಿಷಿದ್ಧವಾಗಿದೆ. ಆದರೂ ಹೇಗೆ ಅವಕಾಶ ಕೊಟ್ಟರೋ ಗೊತ್ತಿಲ್ಲ ಎಂದಿದ್ದಾರೆ. ಪ್ರಾಣಿ ಬಲಿ ಮಾಡಿದವರ ವಿರುದ್ದ ಮತ್ತು ನಿರ್ಲಕ್ಷ ಮಾಡಿದ ಮುಜರಾಯಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ ಅವರ ವಿರುದ್ಧವೂ ಸೂಕ್ತ ಕ್ರಮ ಆಗಬೇಕು, ಇದು ಸ್ಪಷ್ಟ ಉಲ್ಲಂಘನೆಯಾಗಿದೆ, ಪಿ.ಎಫ್.ಐ ಸೇರಿ ಇದರ ಹಿಂದೆ ಯಾರೇ ಇರಬಹುದು ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here