ಕೊಪ್ಪ: ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ಹಸುಗಳು ಜೀವಂತವಾಗಿ ಸುಟ್ಟು ಹೋಗಿರುವ ಕರುಣಾಜನಕ ಘಟನೆ ತಾಲೂಕಿನ ಹಿರೇಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ನಡೆದಿದೆ.
ರೈತ ನಾಗೇಶ್ ಎಂಬುವರಿಗೆ ಸೇರಿದ ಎರಡು ಹಸುಗಳು ಸಜೀವ ದಹನವಾಗಿದೆ. ಶನಿವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿದೆ.
ಶುಕ್ರವಾರ ರಾತ್ರಿ ಶಿವಪುರ ಗ್ರಾಮದ ನಾಗೇಶ್ ಮನೆಯಲ್ಲಿ ಯಾರೂ ಇರಲಿಲ್ಲ. ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಎರಡು ಹಸುಗಳನ್ನ ಕಟ್ಟಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಎರಡು ಹಸುಗಳು ಸಜೀವ ದಹನವಾಗಿವೆ.
ಹಸುಗಳನ್ನ ಹಗ್ಗದಿಂದ ಕಟ್ಟಿ ಹಾಕಿದ್ದರಿಂದ ಅವು ತಪ್ಪಿಸಿಕೊಳ್ಳಲು ಸಾಧ್ಯವಾಗದೆ. ಬೆಂಕಿಯ ಕೆನ್ನಾಲಿಗೆಯಲ್ಲಿ ಉಸಿರು ಚೆಲ್ಲಿವೆ. ಮನೆ ಮೇಲೆ ಹಾಗೂ ಸುತ್ತಮುತ್ತ ದಟ್ಟ ಹೊಗೆ ಆವರಿಸಿದ್ದರಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಬೆಂಕಿ ತಗುಲಿರುವುದು ತಿಳಿದು ಬಂದಿದೆ.
