Home Crime News ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ; ಇಬ್ಬರು ಅರೆಸ್ಟ್
ತೀರ್ಥಹಳ್ಳಿ : ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಬರುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ ಮತ್ತು ಸಂಪತ್ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಬ್ಬರು ಆರೋಪಿಗಳು ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಮತ್ತಿಬ್ಬರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ನಡೆದಿದ್ದೇನು?
ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿ ಸೋಮವಾರ ರಾತ್ರಿ 10.30ರ ಸಮಯದಲ್ಲಿ ದಲಿತ ಪುರುಷ ಮತ್ತು ಮಹಿಳೆ ಆರಗ ವೈನ್ ಶಾಪಿನಲ್ಲಿ ಮದ್ಯ ಖರೀದಿಸಲು ಹೋಗಿದ್ದಾರೆ. ಈ ವೇಳೆ ಅಲ್ಲಿದ್ದ ಯುವಕರ ಪೈಕಿ ಇಬ್ಬರು ಇಲ್ಲಿ ಏಕೆ ಮಹಿಳೆಯರನ್ನು ಕರೆದುಕೊಂಡು ಬಂದಿದ್ದೀರಿ ಎಂದು ಕೇಳಿದ್ದಾರೆ. ಇದೆ ವಿಷಯಕ್ಕೆ ಗಲಾಟೆ ನಡೆದು ದೂರುದಾರಳ ಪತಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಅತ್ಯಾಚಾರ ಯತ್ನದ ಬಗ್ಗೆ ಶಂಕೆ ವ್ಯಕ್ತವಾಗಿದ್ದು ಪ್ರಕರಣ ತನಿಖಾ ಹಂತದಲ್ಲಿದೆ. ಗಲಾಟೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಆತನ ಪತಿ ಪಟ್ಟಣದ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ನಾಲ್ವರ ವಿರುದ್ಧ ಕೇಸು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?
ಆರೋಗ್ಯ ಸರಿ ಇಲ್ಲದ ಕಾರಣ ಸೋಮವಾರ ಪತಿ ಜತೆ ಮಹಿಳೆ ತೀರ್ಥಹಳ್ಳಿ ಅಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಿಂದ ಸಂಜೆ ಮನೆಗೆ ತೆರಳುತ್ತಿದ್ದ ಸಂದರ್ಭ ದಲಿತ ದಂಪತಿಗಳ ಮೇಲೆ ಬೈಕ್ ಹರಿಬಿಟ್ಟು ಅರೋಪಿಗಳು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಕುಡಿತದ ಮತ್ತಿನಲ್ಲಿದ್ದ ನಾಲ್ವರು ಯುವಕರು 2 ಬೈಕ್ಗಳನ್ನು ಹರಿಬಿಟ್ಟ ಕಾರಣಕ್ಕೆ ಪತಿಯ ಕಾಲು, ತಲೆಗೆ ಏಟು ಬಿದ್ದು ಕೆಲ ಕಾಲ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಈ ಸಂದರ್ಭ ಆರೋಪಿಗಳು ಮಹಿಳೆಯ ಬಟ್ಟೆ ಹರಿದಿದ್ದಾರೆ. ಪ್ರಜ್ಞೆ ಹೀನಾಸ್ಥಿತಿಯಲ್ಲಿದ್ದ ಮಹಿಳೆಯ ಪತಿ ತಕ್ಷಣ ಎಚ್ಚರಗೊಂಡು ಕಿರುಚಿಕೊಂಡ ನಂತರ ಸ್ಥಳೀಯರು ಘಟನಾ ಸ್ಥಳಕ್ಕೆ ಓಡಿ ಬಂದಿದ್ದಾರೆ ಎಂದು ದೂರು ನೀಡಿದ್ದಾರೆ. ಆದರೆ ಸ್ಥಳೀಯರು ಹೇಳುವ ಪ್ರಕಾರ ಅಲ್ಲಿ ಸಣ್ಣ ಗಲಾಟೆ ನಡೆದಿದೆ. ಆದರೆ ಅತ್ಯಾಚಾರ ಯತ್ನ ನಡೆದಿರುವ ಬಗ್ಗೆ ಅನುಮಾನ ಇದೆ ಎನ್ನುತ್ತಾರೆ. ಮುಂದಿನ ಬೆಳವಣಿಗೆ ಪೊಲೀಸ್ ತನಿಖೆಯಲ್ಲಿ ಬಯಲಾಗಬೇಕಿದೆ.
Related
You cannot copy content of this page