ದೇವಸ್ಥಾನ ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದವರ ಬಂಧನ

0
461

ಭದ್ರಾವತಿ: ದೇವಸ್ಥಾನ ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ಹೊಸಮನೆಯ ವಸಂತರಾಜು(37) ಹಾಗೂ ಶಿವಮೊಗ್ಗ ಬೇಡರಹೊಸಹಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತ ಆರೋಪಿಗಳು. ಭದ್ರಾವತಿಯ ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಾಲಯಕ್ಕೆ ಕನ್ನ ಹಾಕಿದ್ದರು. ಅಲ್ಲದೇ ತಾಲೂಕಿನ ವಿವಿಧ ಭಾಗದಲ್ಲಿ ಹಗಲು ದರೋಡೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಭದ್ರಾವತಿ ಪೇಪರ್ ಟೌನ್ ಠಾಣೆ ಮತ್ತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಸುಮಾರು 10ಲಕ್ಷದ 25 ಸಾವಿರ ರೂ. ಮೌಲ್ಯದ 220 ಗ್ರಾಂ ಚಿನ್ನಾಭರಣ ಮತ್ತು 132 ಗ್ರಾಂ ಬೆಳ್ಳಿಯ ಆಭರಣ ಹಾಗೂ 5000 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here