ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

0
194

ಶಿವಮೊಗ್ಗ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಜಿಲ್ಲೆಯ ‘ಬಿ’ ಪ್ರವರ್ಗ ಮುಜರಾಯಿ ದೇವಾಲಯದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಮತ್ತೂರು ಹೋಬಳಿ ಮೃಗವಧೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಮುಂದಿನ 3 ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 10/06/2022ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ತೀರ್ಥಹಳ್ಳಿ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಧಾರ್ಮಿಕ ಪರಿಷತ್‍ನ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ|| ಸೆಲ್ವಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here