ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ.ಸಿ ನಾಗೇಶ್

0
206

ಚಿಕ್ಕಮಗಳೂರು : ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿದ್ದು ಇದನ್ನು ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಟಾನಗೊಳಿಸಲು ಶಿಕ್ಷಕರ ಪಾತ್ರ ದೊಡ್ಡದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆ ಅಡಿ ನಿರ್ಮಾಣವಾಗಿರುವ ಕಟ್ಟಡ ಕಾಮಗಾರಿ ಉದ್ಘಾಟನೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಶಿಕ್ಷಣ ಪದ್ದತಿಯ ಲೋಪಗಳನ್ನು ಸರಿಪಡಿಸಿ ಸಮಾಜಮುಖಿಯಾಗಿ, ಮೌಲ್ಯದೊಂದಿಗೆ, ಕೌಶಲ್ಯಯುತ ಜತೆಗೆ ರಾಷ್ಟ್ರ ಪ್ರೇಮ ಬೆಳೆಸುವಲ್ಲಿ ಹೊಸ ಶಿಕ್ಷಣ ನೀತಿ ಸಹಕಾರಿಯಾಗಲಿದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇಶದಲ್ಲಿ ಉತ್ತಮ ನಾಗರೀಕರನ್ನು ನಿರ್ಮಾಣ ಮಾಡುವುದು ಶಿಕ್ಷಣದ ಮಾನದಂಡವಾಗಬೇಕು. ಇತ್ತೀಚಿನ ದಿನಗಳಲ್ಲಿ ಬಹುತೇಕ ವಿದ್ಯಾವಂತರೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ವಿಷಾದ ದ ಸಂಗತಿ. ಸಂಸ್ಕಾರ, ಮಾನವೀಯತೆ ಜೊತೆಗೆ ವ್ಯಕ್ತಿತ್ವ ನಿರ್ಮಿಸುವ ಕಾರ್ಖಾನೆಗಳಾಗಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮತನಾಡಿದರು ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿದ್ದರು.

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್.ಅಕ್ಷಯ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು. ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಶಪ್ಪ, ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here