ಧರ್ಮಸ್ಥಳದಲ್ಲಿ ಮದುವೆಯಾಗಿ ವಾಪಸ್ಸಾಗುವಾಗ ಚಾರ್ಮಾಡಿ ಘಾಟ್‌ನಲ್ಲಿ ಕಂದಕಕ್ಕೆ ಉರುಳಿದ ನವ ವಧು-ವರರಿದ್ದ ವಾಹನ !

0
1518

ಮೂಡಿಗೆರೆ: ನವ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಾಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಮೂಲದ ವಧು-ವರರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಾಹವಾಗಿ ಚಿಕ್ಕಮಗಳೂರಿಗೆ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕ್ಕೆ ಉರುಳಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಜಾಹಿರಾತು

LEAVE A REPLY

Please enter your comment!
Please enter your name here