ನನಗೆ ಮತ ನೀಡುವ ಮೂಲಕ ಗೆಲುವಿಗೆ ಸಹಕರಿಸಿ: ಆರ್. ಪ್ರಸನ್ನ ಕುಮಾರ್

0
228

ಶಿಕಾರಿಪುರ: ಗ್ರಾಮ ಪಂಚಾಯಿತಿಯ ಚುನಾವಣೆ ಎಂದರೆ ಸಾಮಾನ್ಯವಾದುದಲ್ಲ ಅಲ್ಲದೆ ಆ ಚುನಾವಣೆಯಲ್ಲಿ ಆಯ್ಕೆಯಾಗಿರುವವರು ಯಾವುದೇ ಪಕ್ಷದ ಚಿಹ್ನೆಯಡಿ ಗೆಲುವು ಸಾಧಿಸಿದವರಲ್ಲ ಪ್ರತೀ ಗ್ರಾಮ ಪಂಚಾಯಿತಿಯ ಸದಸ್ಯರು ಅವರದ್ದೇ ಆದ ಕಠಿಣ ಪರಿಶ್ರಮದಿಂದ ಗೆಲುವು ಸಾಧಿಸಿ ನಂತರ ವಿವಿಧ ಪಕ್ಷಗಳಿಗೆ ಬೆಂಬಲ ಸೂಚಿಸಿದ್ದಾರೆ ಇಂತಹಾ ಚುನಾಯಿತ ಸದಸ್ಯರು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಮತ ನೀಡುವ ಮೂಲಕ ನನ್ನ ಗೆಲುವಿಗೆ ಸಹಕರಿಸಬೇಕು ಎಂದು ಎರಡನೇ ಬಾರಿ ಗೆಲುವು ಅಪೇಕ್ಷಿಸಿ ಕಾಂಗ್ರೆಸ್ ಪಕ್ಷದಿಂದ ಕಣದಲ್ಲಿರುವ ಹಾಲಿ ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್ ತಿಳಿಸಿದರು.

ಶನಿವಾರ ಪಟ್ಟಣದ ಶಿಶುವಿಹಾರ ರಸ್ತೆಯಲ್ಲಿರುವ ಕೊಳ್ಳಿ ಕಾಂಪ್ಲೆಕ್ಸಿನ ರಾಜ್ ಕನ್ವೇಷನ್ ಹಾಲ್ ನಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡುವ ಮೂಲಕ ಮಾತನಾಡಿದ ಅವರು, ಈ ಬಾರಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯು ಸಾಮಾನ್ಯ ಚುನಾವಣೆಯಿಂದಾಗಿರಲಿಲ್ಲ. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯ ರೀತಿಯಲ್ಲಿ ನಡೆದಿದೆ. ಇಂತಹಾ ಚುನಾವಣೆಯಲ್ಲಿ ಯಾವುದೇ ರೀತಿಯ ಪಕ್ಷದ ಚಿಹ್ನೆಯಡಿ ಗೆಲುವು ಸಾಧಿಸಿದವರಲ್ಲ ಪ್ರತೀ ಗ್ರಾಮ ಪಂಚಾಯಿತಿಯ ಸದಸ್ಯರು ಅವರದ್ದೇ ಆದ ಕಠಿಣ ಪರಿಶ್ರಮದಿಂದ ದುಡಿದು ಸಾರ್ವಜನಿಕರಿಗೆ ಸಹಾಯ ಮಾಡುವ ಮೂಲಕ ಗೆಲುವು ಸಾಧಿಸಿದ್ದೀರಿ ಗೆಲುವು ಸಾಧಿಸಿ, ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದೀರಿ ನಂತರ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದೀರಿ. ಮುಂಬರುವ ವಿಧಾನ ಪರಿಷತ್ತಿನ ಚುನಾವಣೆಗೆ ಮತ್ತೊಮ್ಮೆ ಆಯ್ಕೆಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಆದ್ದರಿಂದ ನೀವು ಮತ್ತು ಎಲ್ಲಾ ಪಂಚಾಯಿತಿಯಲ್ಲಿ ಗೆಲುವು ಸಾಧಿಸಿದ ವಿವಿಧ ಪಕ್ಷಗಳ ನಿಮ್ಮ ಸ್ನೇಹಿತರಿಗೆ ಮನವೊಲಿಸಿ ನನಗೆ ಮತ ನೀಡಿ ನನ್ನ ಗೆಲುವಿಗೆ ಸಹಕರಿಸಿದರೆ ಮುಂದೆ ನಿಮ್ಮ ಸಹಾಯಕ್ಕೆ ಗೌರವ ತರುವ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಜಿಲ್ಲೆಯಲ್ಲಿ ಒಟ್ಟು 4173 ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದವರಿದ್ದು, ಅವರಲ್ಲಿ 3900 ಕ್ಕೂ ಅಧಿಕ ಗ್ರಾಮ ಪಂಚಾಯಿತಿಯ ಸದಸ್ಯರಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಶೇಕಡಾ 50% ರಷ್ಟು ಚುನಾಯಿತ ಪ್ರತಿನಿಧಿಗಳು ನನಗೆ ಮತ ನೀಡಿ ನನ್ನ ಗೆಲುವಿಗೆ ಸಹಕರಿಸಿದ್ದರು. ಈ ಬಾರಿ ಶೇಕಡಾ 75% ರಷ್ಟು ಮತ ನೀಡುವ ಮೂಲಕ ನನ್ನ ಗೆಲುವಿಗೆ ಕಾರಣೀಭೂತರಾದಬೇಕು. ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾಗಿದ್ದಾಗ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿಯತ್ತ ಗಮನ ಹರಿಸಿದ್ದರು.ಆದರೀಗ ಅವರು ನೀಡಿದ ಅನೇಕ ಯೋಜನೆಗಳನ್ನು ತಟಸ್ಥ ಗೊಳಿಸಲಾಗಿದೆ. ಅವರ ಅವಧಿಯಲ್ಲಿ ತಾಲ್ಲೂಕಿನ ಕೊರಟಗೆರೆ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡಲಾಗಿದೆಯಲ್ಲದೇ, ತಾಲ್ಲೂಕಿನ ವಿವಿಧ ಗ್ರಾಮಗಳ ರಸ್ತೆ ಚರಂಡಿ ಸೇರಿದಂತೆ ಹಲವು ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್ ಮಾತನಾಡಿ, ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳಿಗೆ ಮಹಿಳೆಯರಿಗೆ ನೀಡಿದ್ದ ಅನೇಕ ಯೋಜನೆಗಳನ್ನು ಈಗಿನ ಪ್ರಧಾನಿ ನರೇಂದ್ರ ಮೋದಿ ಅಮಿತ್ ಷಾ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಎಲ್ಲಾ ರೀತಿಯ ಯೋಜನೆಗಳನ್ನು ತಟಸ್ಥ ಗೊಳಿಸಿದ್ದಾರೆ. ದೇಶದ ಕೃಷಿ ಕಾಯ್ದೆಯನ್ನು ತಿದ್ದುಪಡಿ ಮಾಡುವುದರ ಮೂಲಕ ರೈತರಿಗೆ ಮೋಸ ಮಾಡಲು ಹೊರಟಿದ್ದರು, ಇದನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ಹೊರಾಟದ ಹಾದಿ ಹಿಡಿದಿದ್ದ ರೈತರಲ್ಲಿ 700 ಕ್ಕೂ ಅಧಿಕ ರೈತರು ಮರಣ ಹೊಂದಿದರು. ಇದರಿಂದಾಗಿ ವಿಶ್ವದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಶೇಕಡಾ 28% ನಷ್ಟು ಹಿಂದೆ ಬಿದ್ದಿದೆ ಎಂದು ಹೇಳಿದರು.

ಸಭೆಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್, ಮಾಜಿ ಶಾಸಕ ಬಿ ಎನ್ ಮಹಾಲಿಂಗಪ್ಪ, ಮಾಜಿ ಕಾಡಾ ಅಧ್ಯಕ್ಷ ನಗರದ ಮಹಾದೇವಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಹೆಚ್ ಎಸ್ ಶಾಂತವೀರಪ್ಪ ಗೌಡ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಪುರಸಭಾ ಸದಸ್ಯರಾದ ಹುಲ್ಮಾರ್ ಮಹೇಶ್, ನಾಗರಾಜ್ ಗೌಡ, ಗೋಣಿ ಪ್ರಕಾಶ್, ಮುಖಂಡರಾದ ಅರುಣ್ ಕುಮಾರ್, ಉಮೇಶ್ ಮಾರವಳ್ಳಿ, ಶಿವುನಾಯ್ಕ್, ಮಲ್ಲಿಕ್ ನಾಯ್ಕ್, ದಯಾನಂದ್ ಗಾಮ, ಪಿ ಬಿ ಮಂಜುನಾಥ್ ರಾವ್ (ಜಿದ್ದು) ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಗ್ರಾಮ ಪಂಚಾಯಿತಿಯ ಸದಸ್ಯರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here