‘ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣ’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪಪಂ ಸದಸ್ಯೆ ! ಅಷ್ಟಕ್ಕೂ ಇವ್ರು ಹೀಗೆ ಮಾಡಿದ್ಯಾಕೆ ಗೊತ್ತಾ?

0
1468

ನರಸಿಂಹರಾಜಪುರ: ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ವಾಟ್ಸಾಪ್ ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ. ಸುಮಾರು 5-6 ಬಗೆಗಳ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಜುಬೇದಾ ಅವರನ್ನು ಎನ್.ಆರ್. ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.

ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಬಾನು ಅಧ್ಯಕ್ಷೆ ಅವಧಿ ಮುಗಿದಿದೆ. ಅವರು ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿ ಜುಬೇದ ಅವರಿಗೆ ಅಧಿಕಾರ ಬಿಟ್ಟುಕೊಡಬೇಕಾಗಿತ್ತು. ಆದರೆ ಸುರಯ್ಯಾ ಬಾನು ಅವರು ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದಾರೆ.

ಸುರಯ್ಯಾ ಬಾನು ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟ ನಡೆದಿತ್ತು. ಇದರಿಂದ ಮನನೊಂದು ಜುಬೇದಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here