ನಾಗರಹಳ್ಳಿಯಲ್ಲಿ ಮೇ 6 ರಂದು 11ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ & ಶಂಕರಾಚಾರ್ಯರ ಜಯಂತೋತ್ಸವ

0
507

ರಿಪ್ಪನ್‌ಪೇಟೆ: ಇಲ್ಲಿನ ಪುರಾಣ ಪ್ರಸಿದ್ದ ಶ್ರೀನಾಗೇಂದ್ರಸ್ವಮಿ ದೇವಸ್ಥಾನ ನಾಗರಹಳ್ಳಿಯಲ್ಲಿ ಮೇ 6 ರಂದು ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 6 ರಂದು ಬೆಳಗ್ಗೆ ಶ್ರೀನಾಗೇಂದ್ರ ಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವದ ಅಂಗವಾಗಿ ಸ್ವಾಮಿಗೆ ಮೂಲಮಂತ್ರ ಹೋಮ, ಪಂಚವಿಂಶತಿ ಕಲಶಾಭಿಷೇಕ ವಿಶೇಷ ಪೂಜಾ ಕಾರ್ಯಗಳೊಂದಿಗೆ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಜರುಗಲಿದೆ. ನಂತರ ಶ್ರೀ ಸ್ವಾಮಿಗೆ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನ ವ್ಯವಸ್ಥಾಪನಾ ಸಮತಿಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here