ನಾಪತ್ತೆಯಾದ ವ್ಯಕ್ತಿಗಾಗಿ ಶೋಧನೆ ನಡೆಸುತ್ತಿರುವಾಗ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಮರ ಕಡಿತಲೆ ಪತ್ತೆ !

0
15892

ಮೂಡಿಗೆರೆ: ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳು ಪತ್ತೆಯಾದ ಘಟನೆ ಬಿದಿರುತಳ ಗ್ರಾಮದಲ್ಲಿ ಪತ್ತೆಯಾಗಿದೆ.

ಬಾಳೂರು ಗ್ರಾಮದ ನಾಗೇಶ್ ಆಚಾರ್ ಬಿದಿರುತಳ ಗ್ರಾಮದಿಂದ ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದು ನಂತರ ಶವವಾಗಿ ದೊರೆತ್ತಿದ್ದರು. ಈ ಸಂದರ್ಭದಲ್ಲಿ ಬಿದಿರುತಳಕ್ಕೆ ಅರಣ್ಯ ಅಧಿಕಾರಿಗಳು ಹುಡುಕಲು ಹೋದ ಸಂದರ್ಭದಲ್ಲಿ ಬಿದಿರುತಳದ ಕೃಷ್ಣೇಗೌಡ ಅವರಿಗೆ ಸೇರಿದ ಮನೆಯಲ್ಲಿ ಮರವನ್ನು ಅಡಗಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೃಷ್ಣೇಗೌಡ ಮೇಲೆ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ಬಸವರಾಜ್, ಅರಣ್ಯ ರಕ್ಷಕ ಪರಮೇಶ್ ಇದ್ದರು.

ಲಕ್ಷಾಂತರ ರೂ. ಬೆಲೆಬಾಳುವ ಮರಗಳ ಸಂಗ್ರಹ ಮಾಡಿದ್ದರೂ ಕೂಡ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳ ಗಮನಕ್ಕೆ ಬಾರದೇ ಇರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here