ಎರಡು ದಿನಗಳ ಕಾಲ ಶಿವಮೊಗ್ಗ ಮತ್ತು ಕಾಫಿನಾಡಿಗೆ ಸಿಎಂ ಪ್ರವಾಸ

0
317

ಶಿವಮೊಗ್ಗ/ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬಳ್ಳಾರಿ, ಕಲಬುರ್ಗಿ, ಬಾಲಗಕೋಟೆ, ಧಾರವಾಡ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ತಾತ್ಕಾಲಿಕ ಪ್ರವಾಸ ಪಟ್ಟಿಯನ್ನು ವಿಶೇಷ ಕರ್ತವ್ಯಾಧಿಕಾರಿ ಚನ್ನಬಸವೇಶ ಅವರು ಬಿಡುಗಡೆ ಮಾಡಿದ್ದಾರೆ.

ನಾಳೆ ಶೃಂಗೇರಿಯ ಶಾರದಾಂಬೆ ದೇವಸ್ಥಾನದ ನಂತರ ಕೊಪ್ಪ ಮಾರ್ಗವಾಗಿ ಬೆಳಗ್ಗೆ 11.50ಕ್ಕೆ ಶಿವಮೊಗ್ಗ ತಲುಪಲಿರುವ ಅವರು ಮಧ್ಯಾಹ್ನ 12ಕ್ಕೆ ಹೋಟೆಲ್ ಹರ್ಷ ದಿ ಫರ್ನ್ಸ್ ನಲ್ಲಿ ಆಯೋಜಿಸಿರುವ ಬಿಜೆಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಇಲ್ಲಿಯೇ ತಂಗಲಿದ್ದು, ಏ.20ರ ಬೆಳಗ್ಗೆ 10ರಿಂದ ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 8ಗಂಟೆಗೆ ಶುಭಶ್ರೀ ಸಮುದಾಯ ಭವನದಲ್ಲಿ ಮಾಜಿ ಸಚಿವ ಈಶ್ವರಪ್ಪ ಅವರ ಮೊಮ್ಮಗಳ ವಿವಾಹ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಶಿವಮೊಗ್ಗದಲ್ಲಿಯೇ ತಂಗಲಿದ್ದು, ಮರುದಿನ ಬೆಳಗ್ಗೆ 9.30ಕ್ಕೆ ಶಿವಮೊಗ್ಗದಿಂದ ತುಮಕೂರಿಗೆ ಪ್ರಯಾಣ ಮಾಡಲಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here