ನಿಟ್ಟೂರು ಶ್ರೀಗಳಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ

0
744

ರಿಪ್ಪನ್‌ಪೇಟೆ: ನಿಟ್ಟೂರು ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸನ್ಮಾನಿಸಿ ಗೌರವಿಸಿದರು.

ಬೆಂಗಳೂರಿನ ರಾಮಾನುಜ ಮಠದಲ್ಲಿ ನಡೆದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ವತಿಯಿಂದ ಸಮಸಮಾಜ ನಿರ್ಮಾಣಕ್ಕೆ ಮಠಗಳ ಸೇವೆಯನ್ನು ಗುರ್ತಿಸಿ ವಿವಿಧ ದಾಸೋಹಕ್ಕೆ ಸಹಕಾರಿಯಾದ ಮುಖ್ಯಮಂತ್ರಿಗಳಿಗೆ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಸಮಾರಂಭದ ಯಶಸ್ಸಿಗೆ ಶ್ರಮಿಸಿದ ಹಾಗೂ ಸನ್ಯಾಸ ದೀಕ್ಷೆಯನ್ನು ತೆಗೆದುಕೊಂಡು 20 ವರ್ಷಗಳು ಆದ ನಿಮಿತ್ತ ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ರೇಣುಕಾನಂದ ಸ್ವಾಮೀಜಿ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಮಠಾಧೀಶರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ತೋಟಗಾರಿಕೆ ಸಚಿವರಾದ ಮುನಿರತ್ನ, ವಿಜಯಶಂಕರ್, ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನದ ಶ್ರೀ ಶಾಂತವೀರ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here