ನಿಟ್ಟೂರು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 91.93 ಫಲಿತಾಂಶ

0
460

ಹೊಸನಗರ: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ತಾಲೂಕಿನ ಕುಗ್ರಾಮದಲ್ಲಿರುವ ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021-22 ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

ಸ್ನೇಹಮಯಿ ಮತ್ತು ಕರ್ತವ್ಯನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ಮಾಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ. 91.93 ಫಲಿತಾಂಶ ಈ ಕಾಲೇಜಿಗೆ ಲಭಿಸಿದೆ.

ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 62 ವಿದ್ಯಾರ್ಥಿಗಳು ಬರೆದಿದ್ದು ಅದರಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

12 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆಯುವುದರ ಜೊತೆಗೆ ಕಲಾ ವಿಭಾಗದ ಗಣೇಶ್. ಜಿ.ಆರ್. ಎಂಬ ವಿದ್ಯಾರ್ಥಿ ಕಲಾವಿಭಾಗದಲ್ಲಿ 573 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲಾಮಟ್ಟದ ರ‍್ಯಾಂಕ್ ಅನ್ನು ಸಹ ಪಡೆದುಕೊಂಡಿದ್ದಾನೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅದ್ಭುತ ಸಾಧನೆಗ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕಾಲೇಜಿನ ಪ್ರಾಚಾರ್ಯರಾದ ವೆಂಕಟೇಶ್, ಕಾಲೇಜಿನ ಹಿರಿಯ ಉಪನ್ಯಾಸಕರಾದ ಗಣೇಶ್ ಮತ್ತು ಉಪನ್ಯಾಸಕರ ಹಾಗೂ ಸಿಬ್ಬಂದಿಗಳ ವೃಂದಕ್ಕೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಹರತಾಳು ಹಾಲಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ನಿಟ್ಟೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಾಡಳಿತ, ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಮತ್ತು ಪ್ರಾಚಾರ್ಯರು ಹಾಗೂ ಉಪನ್ಯಾಸಕರ ವೃಂದಕ್ಕೆ, ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here