ನಿಯಂತ್ರಣ ತಪ್ಪಿ ಕಾರು ಅಪಘಾತ ; ಅಪ್ಪ, ಮಗ ಸಾವು !

0
591

ಮೂಡಿಗೆರೆ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪ್ಪ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಮುತ್ತಿಗೆಪುರ ಗೇಟ್ ಬಳಿ ನಡೆದಿದೆ.

ತಾಲ್ಲೂಕಿನ ಮುತ್ತಿಗೆಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಅಪ್ಪ ಮಗ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಧರ್ಮಸ್ಥಳಕ್ಕೆ ಹೋಗಿ ಮಂಜುನಾಥ ಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ನರಸಿಂಹರಾಜ್ (46) ಮತ್ತು ಕಿರಣ್ (23) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ.

ಮೃತರು ಬೆಂಗಳೂರಿನ ರಾಜಾಜಿನಗರದ ನಿವಾಸಿಗಳಾಗಿದ್ದಾರೆ. ಕುಟುಂಬ ಸಮೇತ ಧರ್ಮಸ್ಥಳಕ್ಕೆ ಹೋಗಿದ್ದರೆನ್ನಲಾಗುತ್ತಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕಳುಹಿಸಲಾಗಿದೆ.

ಮೂಡಿಗೆರೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here