ನ. 14 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಲಾಗುವುದು: ಹೆಚ್.ಎಸ್. ಸುಂದರೇಶ್

0
121

ಶಿವಮೊಗ್ಗ: ನವೆಂಬರ್ 14 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು 12 ವರ್ಷಗಳ ನಂತರ ಸದಸ್ಯತ್ವ ಅಭಿಯಾನವನ್ನು ಗಂಭೀರವಾಗಿ ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದೆ ಎಂದರು.

ನ. 14 ರಂದು ನಡೆಯಲಿರುವ ಸದಸ್ಯತ್ವ ಅಭಿಯಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ನಾಯಕರು, ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದಲೂ ಕೂಡ ಎಲ್ಲಾ ಕಾಂಗ್ರೆಸ್ ಮುಖಂಡರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಎಲ್ಲಾ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ನ. 19 ರಿಂದ ಜಿಲ್ಲೆಯಲ್ಲೂ ಕೂಡ ಸದಸ್ಯತ್ವ ಅಭಿಯಾನವನ್ನು ಎರಡು ತಿಂಗಳುಗಳ ಕಾಲ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದರು.

ಬಿಜೆಪಿ ಈಗ ಹಗರಣಗಳ ಗೂಡಾಗಿದೆ. ಬಿಟ್ ಕಾಯಿನ್ ಭ್ರಷ್ಟಾಚಾರ ಪಕ್ಷವನ್ನು ಸುತ್ತಿಕೊಂಡಿದೆ. ಹ್ಯಾಕರ್ ಶ್ರೀಕೃಷ್ಣ ಎಂಬಾತ ಹ್ಯಾಕ್ ಮಾಡಿ ಸರ್ಕಾರಿ ಖಜಾನೆಗಳನ್ನು ಲೂಟಿ ಮಾಡಿದ್ದಾನೆ. ನಂತರ ಈ ಭ್ರಷ್ಟಾಚಾರ ಮತ್ತು ಲೂಟಿಯ ಹಿಂದೆ ಬಿಜೆಪಿ ನಾಯಕರು ಇದ್ದಾರೆ ಎಂಬುದು ಈಗ ಬಹಿರಂಗವಾಗಿದೆ. ಈಗಾಗಲೇ ಬಿಜೆಪಿಯಲ್ಲಿ ತಲ್ಲಣ ಉಂಟು ಮಾಡಿರುವ ಈ ಪ್ರಕರಣ ಕರ್ನಾಟಕ ಸರ್ಕಾರವನ್ನು ಉರುಳಿಸುತ್ತದೆ ಎಂಬುದರಲ್ಲಿ ಯಾವ ಅನುಮಾನಗಳೂ ಇಲ್ಲ ಎಂದು ಸುಂದರೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಹೆಚ್.ಸಿ. ಯೋಗೀಶ್, ರೇಖಾ ರಂಗನಾಥ್, ಶಾಮೀರ್ ಖಾನ್, ಜಿಲ್ಲಾ ಕಾಂಗ್ರೆಸ್ ಆಡಳಿತ ಉಸ್ತುವಾರಿ ಸಿ.ಎಸ್ ಚಂದ್ರಭೂಪಾಲ್, ಪ್ರಮುಖರಾದ ಚಂದನ್, ನಾಗರಾಜ್ ಮತ್ತಿತರರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here