23.2 C
Shimoga
Sunday, November 27, 2022

ನ.17 ರಂದು ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನ ಕಾರ್ಯಕ್ರಮ

ಶಿವಮೊಗ್ಗ : ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರೆಸ್ ಟ್ರಸ್ಟ್, ಕಾರಾಗೃಹ ಮತ್ತು ಸುಧಾರಣಾ ಇಲಾಖೆ, ಕೇಂದ್ರ ಕಾರಾಗೃಹ, ಸೋಗಾನೆ ಇವರ ಸಂಯುಕ್ತ ಆಶ್ರಯದಲ್ಲಿ ನ.17 ರ ಗುರುವಾರ ಬೆಳಗ್ಗೆ 11 ಗಂಟೆಗೆ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಮಾದಕ ವಸ್ತು ವಿರೋಧಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಧ್ಯಕ್ಷತೆಯನ್ನು ಡಾ. ಆರ್. ಅನಿತಾ, ಮುಖ್ಯ ಅಧೀಕ್ಷಕರು, ಕೇಂದ್ರ ಕಾರಾಗೃಹ, ಸೋಗಾನೆ ಇವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಾ. ಧನಂಜಯ ಸರ್ಜಿ, ಮುಖ್ಯಸ್ಥರು, ಸರ್ಜಿ ಗ್ರೂಪ್ ಆಫ್ ಹಾಸ್ಪಿಟಲ್ಸ್. ಇವರು ಪಾಲ್ಗೊಳ್ಳಲಿದ್ದು,
ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್. ಮಂಜುನಾಥ್, ಸೋಗಾನೆಯ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಶಿವಾನಂದ ಆರ್. ಶಿವಪುರ ಉಪಸ್ಥಿತರಿರಲಿದ್ದಾರೆ

ನಮ್ಮೆಲ್ಲಾ ಸದಸ್ಯರು ಈ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಕಾರ್ಯದರ್ಶಿ ಇವರು ಕೋರಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!