20.6 C
Shimoga
Friday, December 9, 2022

ನ.18ರಂದು ನೂತನ ವೀರಶೈವ ಸಾಂಸ್ಕೃತಿಕ ಭವನದ ಉದ್ಘಾಟನೆ


ಶಿವಮೊಗ್ಗ : ಶಿವಮೊಗ್ಗೆಯ ಶ್ರೀ ವೀರಶೈವ ಕಲ್ಯಾಣ ಮಂದಿರದ ವತಿಯಿಂದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ನೂತನ ವೀರಶೈವ ಸಾಂಸ್ಕೃತಿಕ ಭವನವನ್ನು ನ.18 ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಉದ್ಘಾಟಿಸುವರು.


ಪ್ರಸಾದ ಮಂದಿರವನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೊಠಡಿಗಳನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.

ಶ್ರೀ ವೀರಶೈವ ಕಲ್ಯಾಣ ಮಂದಿರದ ಅಧ್ಯಕ್ಷ ಟಿ.ವಿ.ಈಶ್ವರಯ್ಯ ಅಧ್ಯಕ್ಷತೆ ವಹಿಸಲಿದ್ದು ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಮಹಾಪೌರ ಶಿವಕುಮಾರ್, ಬಸವೇಶ್ವರ ವೀ.ಸ.ಸೇ.ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಜಿ.ನಾಗರಾಜ್ ಸೇರಿದಂತೆ ಎಸ್.ಮಲ್ಲೇಶಪ್ಪ, ಕೆ.ಎಸ್.ತಾರಾನಾಥ, ರುದ್ರಮುನಿ ಎನ್.ಸಜ್ಜನ್, ಹೆಚ್.ಎಂ. ಚಂದ್ರಶೇಖರಪ್ಪ, ಆಶಾ ಚಂದ್ರಪ್ಪ ಹಾಗೂ ಎನ್.ಡಿ.ವಿ.ಹಾಸ್ಟೆಲ್ ಟ್ರಸ್ಟನ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿರುವರು.


ಯಡಿಯೂರು ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದು ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸುವರು.


ಅಂದು ಬೆಳಿಗ್ಗೆ 9.00ರಿಂದ ವೀರಶೈವ ಕಲ್ಯಾಣ ಮಂದಿರದಿಂದ ಸಮಾರಂಭದ ಸ್ಥಳದ ವರೆಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವೀರಶೈವ ಕಲ್ಯಾಣ ಮಂದಿರದ ಗೌರವ ಕಾರ್ಯದರ್ಶಿ ಎನ್.ಜೆ.ರಾಜಶೇಖರ(ಸುಭಾಷ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!