20.6 C
Shimoga
Friday, December 9, 2022

ನ.19 ರಂದು ಹೊಸನಗರ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆ

ಹೊಸನಗರ : ಸರ್ಕಾರದಿಂದ ಮಾನ್ಯತೆ ಹೊಂದಿರುವ ತಾಲೂಕಿನ ಎಲ್ಲ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗು ಪ್ರೌಢಶಾಲೆ ವಿಭಾಗದ ಶಿಕ್ಷಕರುಗಳಿಗೆ ನ.19 ರಂದು ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಸ್ಪರ್ಧೆ ನಡೆಯಲಿದ್ದು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರು ಪಾಲ್ಗೊಂಡು ಸ್ಪರ್ಧೆಯಲ್ಲಿ ಭಾಗವಹಿಸಿಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪದ ನಿಮಿತ್ತ ಬ್ಲಾಕ್ ಯೋಜನಾ ಸಮನ್ವಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಭಕ್ತಿಗೀತೆ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಟೋಪಕರಣಗಳ ತಯಾರಿ ಸ್ಪರ್ಧೆ( TLM), ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ಸಾಮಾನ್ಯ ಜ್ಞಾನ ಹಾಗೂ ವಿಜ್ಞಾನ ವಿಭಾಗದ ರಸಪ್ರಶ್ನೆ ಸ್ಪರ್ಧೆಗಳನ್ನ ಏರ್ಪಡಿಸಿರುವುದಾಗಿ ಶಿಕ್ಷಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

ಒಬ್ಬ ಶಿಕ್ಷಕರಿಗೆ ಒಂದೇ ಸ್ಪರ್ಧೆಯಲ್ಲಿ ಭಾಗವಹಿಸಲು ಮಾತ್ರ ಅವಕಾಶವಿದೆ. ಅತಿಥಿ ಶಿಕ್ಷಕರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಭಕ್ತಿಗೀತೆ ಸ್ಪರ್ಧೆಗೆ ಪಕ್ಕವಾದ್ಯ ಬಳಸುವಂತಿಲ್ಲ. ಆಶುಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳಿಗೆ ಕನ್ನಡ ಮಾಧ್ಯಮದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪಾಟೋಪಕರಣಗಳಿಗೆ ಎರಡರಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಗೆ ಬೇಕಾಗುವ ಅವಶ್ಯಕ ಸಾಮಗ್ರಿಗಳನ್ನು ಸ್ಪರ್ಧಿಗಳೇ ಹೊಂದತಕ್ಕದ್ದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!