23.2 C
Shimoga
Sunday, November 27, 2022

ನ.22 ಕ್ಕೆ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಅಧ್ಯಯನಕ್ಕೆ ಕೇಂದ್ರ ನಿಯೋಜಿತ ಸಮಿತಿ ರಾಜ್ಯಕ್ಕೆ ಆಗಮನ ; ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ಞರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು, ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ, ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿ ಎಂದು ಹಾರೈಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ, ಎಲೆಚುಕ್ಕಿ ರೋಗಕ್ಕೆ ಪರಿಹಾರ ಬಯಸಿ ನಿಕಟಪೂರ್ವ ಮುಖ್ಯಮಂತ್ರಿಗಳೂ ಹಾಗೂ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿದ್ದು ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು.

ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆಚುಕ್ಕಿ ರೋಗಕ್ಕೆ ಬಲಿಯಾಗಿದ್ದು ಕಾಳ್ಗಿಚ್ಚಿನಂತೆ ಇತರೆಡೆ ಹರಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿ, ಇದೇ 22ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದು ತಿಳಿಸಿದ್ದಾರೆ.

ಸರಿಸುಮಾರು 50 ಲಕ್ಷ ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ, ಎಲೆಚುಕ್ಕಿ ರೋಗದಿಂದ ನಲುಗಿದ್ದು ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗದಲ್ಲಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕೃಷ್ಣಭಟ್ ರವರು ಸೇರಿದಂತೆ ಇತರ ಗಣ್ಯರು ಇದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!