ಪಂಚಾಯಿತಿ ಅಧಿಕಾರಿಗಳು ಅಭಿವೃದ್ಧಿಗೆ ಮುಂದಾಗಬೇಕು: ಶಾಸಕ ಹರತಾಳು ಹಾಲಪ್ಪ

0
367

ರಿಪ್ಪನ್‌ಪೇಟೆ: ಯಾವುದೇ ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಪಾತ್ರ ಪ್ರಮುಖವಾಗಿದ್ದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಭಿವೃದ್ಧಿ ಕಾರ್ಯಕ್ಕೆ ಮುಂದಾಗಬೇಕು ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.

ಶನಿವಾರ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ಟುಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಜೊತೆಗೆ ಗ್ರಾಮದ ಪಂಚಾಯಿತಿ ಅಧಿಕಾರಿಗಳು ಕೈ ಜೋಡಿಸಿದಾಗ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ. ಈ ದಿಸೆಯಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಗ್ರಾಮದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗ ಪಡೆದುಕೊಳ್ಳುವುದರ ಮೂಲಕ ಗ್ರಾಮದ ಅಭಿವೃದ್ಧಿಯತ್ತ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹರಿಸಬೇಕು. ಅಭಿವೃದ್ಧಿ ಕಾಮಗಾರಿಗಳು ಕಳಪೆ ಆಗದಂತೆ ನೋಡಿಕೊಳ್ಳುವ ಅಭೂತಪೂರ್ವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರಿಗೆ ಇದೆ ಎಂದು ಹೇಳಿದರು.

ಕೊರೊನಾ ಒಂದು ಮತ್ತು ಎರಡನೇ ಅಲೆಯನ್ನು ಎದುರಿಸಿದಂತೆ ಈಗಾಗಲೆ ಕೇರಳ ಪ್ರವೇಶಿಸಿರುವ ಮೂರನೇ ಅಲೆಯನ್ನು ರಾಜ್ಯದಲ್ಲಿ ಪ್ರವೇಶಿಸುವ ಮುನ್ನವೇ ಮುಂಜಾಗ್ರತೆ ವಹಿಸಿ ಕೊರೊನಾ ನಿಯಮಗಳನ್ನು ಪಾಲಿಸುವ ಬಗ್ಗೆ ಜಾಗೃತಿ ಮೂಡಿಸಿ, ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 19 ಸಹಸ್ರ ಕಾರ್ಮಿಕರುಗಳಿದ್ದು ಸರ್ಕಾರದ ಕಾರ್ಮಿಕ ಇಲಾಖೆಯಿಂದ 10 ಸಾವಿರ ಆಹಾರದ ಕಿಟ್‌ಗಳು ಬಂದಿರುತ್ತವೆ ಮುಂದಿನ ದಿನಗಳಲ್ಲಿ ಉಳಿದವರಿಗೂ ವಿತರಣೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಿವರಿಸಿದ ಅವರು ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶರಾವತಿ, ಮಡೆನೂರು, ಸಾವೇಹಕ್ಲು ಮುಳುಗಡೆ ಪ್ರದೇಶದ ಸಂತ್ರಸ್ತರುಗಳೇ ಹೆಚ್ಚು ವಾಸಿಸುತ್ತಿದ್ದು ಅವರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರಕಿಲ್ಲದೆ ಇರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿ, ಸರ್ಕಾರ ಮಟ್ಟದಲ್ಲಿ ಸಾಗುವಳಿದಾರರ ಪರವಾಗಿ ಧ್ವನಿ ಎತ್ತಲಾಗಿದ್ದು ಮುಂಬರುವ ದಿನಗಳಲ್ಲಿ ಸುಪ್ರೀಂ ನ್ಯಾಯಾಲಯಕ್ಕೂ ಹೋಗಿ ಸಂತ್ರಸ್ಥರ ಪರ ಯಾವುದೇ ಹೋರಾಟಕ್ಕೂ ಸಿದ್ದನಿರುವುದಾಗಿ ಭರವಸೆ ನೀಡಿದರು.

ಈಗಾಗಲೇ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 9.30 ಕೋಟಿ ರೂ. ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಬರುವ ಮಾರ್ಚಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭವಾನಿ ದಿವಾಕರ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಬುಕ್ಕಿವರೆ, ಗ್ರಾ.ಪಂ. ಸದಸ್ಯರಾದ ಬೆಳ್ಳೂರು ತಿಮ್ಮಪ್ಪ, ಅರುಣ್, ರವಿ, ಹೇಮಾವತಿ, ಪಲ್ಲವಿ, ಕವಿತಾ, ಗಿರಿಜಮ್ಮ, ಷಣ್ಮುಖಪ್ಪ, ಉದ್ಯಮಿ ನಾಗರಾಜ್ ಶೆಟ್ಟಿ, ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಎ.ಟಿ ನಾಗರತ್ನ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜೀರಾವ್, ಬಿಜೆಪಿ ಮುಖಂಡರಾದ ಆರ್.ಟಿ ಗೋಪಾಲ, ಮೆಣಸೆ ಆನಂದ, ಕಾರ್ಮಿಕ ಇಲಾಖೆಯ ಅಧಿಕಾರಿ ಶಿಲ್ಪ ಇನ್ನಿತರರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here