ಪಠ್ಯದಲ್ಲಿ ಭಗವದ್ಗೀತೆ ಪರಿಚಯಿಸಲು ಪ್ರಾಣೇಶ್ ಆಗ್ರಹ

0
191

ಮೂಡಿಗೆರೆ: ರಾಜ್ಯದಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಪರಿಚಯಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಸರ್ಕಾರವನ್ನು ಒತ್ತಾಯಿಸಿದರು.

ಭಗವದ್ಗೀತೆಯನ್ನು ಗುಜರಾತ್‍ನಲ್ಲಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಶಾಲಾ ಪಠ್ಯಕ್ರಮದ ಭಾಗವಾಗಲಿದೆ ಎಂದು ಆ ರಾಜ್ಯದ ಶಿಕ್ಷಣ ಸಚಿವರೇ ಘೋಷಿಸಿದ್ದಾರೆ.

ಭಗವದ್ಗೀತೆಯಲ್ಲಿರುವ ಮೌಲ್ಯಗಳು ಮತ್ತು ತತ್ವಗಳನ್ನು ಶಾಲಾ ಪಠ್ಯಕ್ರಮದಲ್ಲಿ ಪರಿಚಯಿಸುವ ಉದ್ದೇಶದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇದು ಅಧುನಿಕ ಮತ್ತು ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳನ್ನು, ಜ್ಞಾನ ವ್ಯವಸ್ಥೆಗಳ ಪರಿಚಯವನ್ನು ಶಿಫಾರಸ್ಸು ಮಾಡುವ ಕೇಂದ್ರದ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿದೆ ಎಂದು ತಿಳಿಸಿ, ಶ್ರೀಕೃಷ್ಣನು ಅರ್ಜುನನಿಗೆ ಉಪದೇಶ ಮಾಡಿದ, ಗೀತಾ ರೂಪದಲ್ಲಿರುವ ತತ್ವಬೋಧನೆಯೇ “ಭಗವದ್ಗೀತೆ’ ಇದು ಜೀವನದ ಸಾರವನ್ನು ವಿವರಿಸುತ್ತದೆ. ನಮ್ಮ ಮಕ್ಕಳು ಭಗದ್ಗೀತೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳಲುಬ ಸಹಾಯವಾಗುತ್ತದೆ ಎಂದರು.

700 ಶ್ಲೋಕಗಳಿರುವ ಪುಸ್ತಕದ ಗಾತ್ರ ನೋಡಿ ಕೆಲವರು ಓದಲು ಹಿಂಜರಿಯುತ್ತಾರೆ. ಆದ್ದರಿಂದ ಭಗವದ್ಗೀತೆಯನ್ನು ಪಠ್ಯಪುಸ್ತಕಗಳಲ್ಲಿ ಪರಿಚಯಿಸಿದರೆ, ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ ಆದ್ದರಿಂದ “ಭಗವದ್ಗಿತೆ”ಯನ್ನು ಪಠ್ಯಪುಸ್ತಕಗಳಲ್ಲಿ ಪರಿಚಯಿಸಬೇಕೆಂದು ಆಗ್ರಹಿಸಿದರು.

ಸರ್ಕಾರದ ಪರವಾಗಿ ಉತ್ತರಿಸಿದ ಶಿಕ್ಷಣ ಸಚಿವರು ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಭಗವದ್ಗೀತೆವನ್ನು ಅಳವಡಿಸುವ ಬಗ್ಗೆ ಸಮಿತಿ ರಚನೆ ಮಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here