ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಸಾಂಸ್ಕೃತಿಕ ಸೌಹಾರ್ದ ಜಾಗೃತಿ ಪಯಣ

0
139

ತೀರ್ಥಹಳ್ಳಿ : ಪಠ್ಯ ಪುಸ್ತಕ ಪರಿಷ್ಕರಣೆಯ ನಿರ್ಧಾರವನ್ನು ಸರ್ಕಾರಕ್ಕೆ ಸರಿಪಡಿಸಿ ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದರು ಸಹ ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿಯೂ ಪಠ್ಯ ಪರಿಷ್ಕರಣೆಯ ಸಮಸ್ಯೆ ಬಗೆಹರಿಸಿಲ್ಲ ಈ ಕಾರಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಜನ್ಮಸ್ಥಳದಿಂದ ಪಾದಯಾತ್ರೆ ಮಾಡುವುದಾಗಿ ಕಿಮ್ಮನೆ ರತ್ನಾಕರ್ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್, ಈಗ ಮತ್ತೊಂದು ಹೋರಾಟಕ್ಕೆ ತೀರ್ಥಹಳ್ಳಿಯಲ್ಲಿ ವೇದಿಕೆ ಸಿದ್ಧಗೊಂಡಿದೆ. ಅದುವೇ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯಿಂದ ಆಗಿರುವ ಪಠ್ಯ ಪುಸ್ತಕ ಅಪಮೌಲ್ಯೀಕರಣ ವೈಧಿಕರಣ, ಅಸಮಾನತೆ, ನಾಡಗೀತೆ ಬಗ್ಗೆ ಹಗುರ ಮಾತು, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ, ನಾರಾಯಣ ಗುರು, ಬಸವಣ್ಣ, ಡಾ. ಬಿ ಅರ್ ಅಂಬೆಡ್ಕರ್, ಶಂಕರಾಚಾರ್ಯರಿಗೆ ಪಠ್ಯ ಪುಸ್ತಕದಲ್ಲಿ ಅವಮಾನ ಮಾಡಿರುವ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿ ಮತ್ತು ಅದನ್ನು ಬೆಂಬಲಿಸುತ್ತರುವ ರಾಜ್ಯ ಸರ್ಕಾರದ ಧೋರಣೆ ವಿರುದ್ದ ಜೂ.15ಕ್ಕೆ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

ಸಾಂಸ್ಕೃತಿಕ ಸೌಹಾರ್ದ ಜಾಗೃತಿ ಪಯಣ ಎಂಬ ಹೆಸರಿನಲ್ಲಿ ಕುಪ್ಪಳ್ಳಿಯ ಕವಿಶೈಲದಿಂದ ಬೆಳಗ್ಗೆ 7 ಗಂಟೆಗೆ ಕುವೆಂಪು ಸಮಾಧಿಗೆ ಪುಷ್ಪಾರ್ಚನೆ ಮಾಡಿ ಮೆರವಣಿಗೆ ಹೋರಡಲಿದ್ದು ತೀರ್ಥಹಳ್ಳಿಯಲ್ಲಿ 12 ಗಂಟೆಗೆ ಆಗಮಿಸಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಸ್ತೂರು ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೂಡುಬಾ ರಾಘವೇಂದ್ರ, ಆಮ್ರಪಾಲಿ ಸುರೇಶ್, ಅಮರನಾಥ ಶೆಟ್ಟಿ, ಆದರ್ಶ ಹುಂಚದಕಟ್ಟೆ, ಪೂರ್ಣೇಶ್ ಕೆಳಕೆರೆ , ವಿಲಿಯಂ ಮಾರ್ಟಿಸ್ ಪಟ್ಟಣಪಂಚಾಯತಿ ಅಧ್ಯಕ್ಷೆ ಶಬನಂ, ಉಪಾಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ಪಾದಯಾತ್ರೆಯಲ್ಲಿ ದೊಡ್ಡ ದೊಡ್ಡ ನಾಯಕರ ಆಗಮನ :

ತೀರ್ಥಹಳ್ಳಿಯಲ್ಲಿ ನಡೆಯಲಿರುವ ಈ ಬೃಹತ್ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಪ್ರಿಯಾಂಕ ಖರ್ಗೆ, ಕಾಗೋಡು ತಿಮ್ಮಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.

ವರದಿ : ಶ್ರೀಕಾಂತ್ ವಿ ನಾಯಕ್

ಜಾಹಿರಾತು

LEAVE A REPLY

Please enter your comment!
Please enter your name here