ಪತಿ ಜೊತೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವು !

0
1284

ಸಾಗರ: ಜೋಗ ಪ್ರವಾಸಕ್ಕೆಂದು ಬಂದಿದ್ದ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ಸಾವು ಕಂಡಿರುವ ಘಟನೆ ವರದಿಯಾಗಿದೆ.

ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ (24) ಕಾಲು ಜಾರಿ ಬಿದ್ದ ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್ ನಿಶಾ ಸಾವನ್ನಪ್ಪಿದ್ದಾರೆ.

ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.

ನಿಶಾ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದೆ.

ಜಾಹಿರಾತು

LEAVE A REPLY

Please enter your comment!
Please enter your name here