ಹೊಸನಗರ: ಪರೀಕ್ಷಾ ಕೊಠಡಿಯಲ್ಲಿ ಉಪನ್ಯಾಸಕರೊಬ್ಬರು ವಿದ್ಯಾರ್ಥಿಯ ಕೈ ಕಚ್ಚಿದ ಘಟನೆ ಇಲ್ಲಿನ ಸರ್ಕಾರಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಸಂಭವಿಸಿದೆ.
ಕಾಲೇಜಿನಲ್ಲಿ ತೃತೀಯ ವರ್ಷದ ಬಿಎ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಕೀರ್ತೇಶ್ ಎಂಬ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದ ಸಹಾಯಕ ಉಪನ್ಯಾಸಕ ಅಂಜನ್ ಕುಮಾರ್ ಪ್ರಶ್ನೆ ಮಾಡಿದ್ದು, ನಕಲು ಮಾಡಲು ಬಳಕೆ ಮಾಡುತ್ತಿದ್ದ ಮೊಬೈಲ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಹಾಗೂ ಪರೀಕ್ಷಾ ಮೇಲ್ವಿಚಾರಕನ ಮೇಲೆ ವಿದ್ಯಾರ್ಥಿ ಹಲ್ಲೆಗೆ ಮುಂದಾಗಿದ್ದಾನೆ ಈ ವೇಳೆ ಸಿಟ್ಟಿಗೆದ್ದ ಉಪನ್ಯಾಸಕರು ವಿದ್ಯಾರ್ಥಿಯ ಕೈ ಕಚ್ಚಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಉಪನ್ಯಾಸಕರೂ ಕೂಡ ಪರೀಕ್ಷಾ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತನ್ನ ಎಡಗೈಯಿಂದ ನನ್ನ ತುಟಿ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿ ವಿರುದ್ಧ ದೂರು ಕೊಟ್ಟಿದ್ದರು.
