ಪರೀಕ್ಷಾ ಪೇ ಚರ್ಚೆ ವೀಕ್ಷಣೆಗೆ ಅವಕಾಶ ; ಜಿಲ್ಲಾಧಿಕಾರಿ ಕೆ.ಎನ್ ರಮೇಶ್

0
147

ಚಿಕ್ಕಮಗಳೂರು: ಪ್ರಧಾನಿ ನರೇಂದ್ರಮೋದಿ ಏಪ್ರಿಲ್ 1 ರಂದು 5ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚೆ ವೀಕ್ಷಣೆಗೆ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ನವದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 11ಕ್ಕೆ ಟೌನ್‍ಹಾಲ್‍ನಲ್ಲಿ ಸಂವಾದ ರೂಪದಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರೆಂದಿದ್ದಾರೆ.

ನೇರಕಾರ್ಯಕ್ರಮದಲ್ಲಿ ಪರೀಕ್ಷೆಯ ಒತ್ತಡ, ಮತ್ತು ಸಂಬಂಧಿಸಿದ ಕ್ಷೇತ್ರದ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಕೊರೊನಾಸೋಂಕಿನಿಂದ ಹೊರಬರುವ, ಪರೀಕ್ಷೆಗಳನ್ನು ಆಫ್‍ಲೈನ್ ಮೋಡ್‍ಗೆ ಬದಲಾಯಿಸುವ ದೃಷ್ಟಿಯಿಂದ ಈ ವರ್ಷ ಪಿಪಿಸಿ ಉಪಕ್ರಮಗಳ ಪ್ರಾಮುಖ್ಯತೆಯನ್ನು ಹೇಳಲಿದ್ದಾರೆಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಕೇಂದ್ರೀಯ ವಿದ್ಯಾಲಯದ ಪ್ರಿನ್ಸಿಪಾಲ್‍ರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here