23.2 C
Shimoga
Sunday, November 27, 2022

ಪೂಜೆಗೆಂದು ನೀರು ಸೇದುವಾಗ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು !

ಸಾಗರ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಳೇಗಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಮಧುಕೇಶ ಭಟ್(57) ಎಂದು ಗುರುತಿಸಲಾಗಿದೆ. ಪೂಜೆಗೆಂದು ಮನೆಯ ಹಿಂಭಾಗದಲ್ಲಿರುವ ಬಾವಿಯಲ್ಲಿ ನೀರು ಸೇದುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಗಮನಿಸಿ ಅಗ್ನಿಶಾಮಕ ದಳದವರಿಗೆ ಕರೆಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.

ಮೃತದೇಹವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!