ಪೊಲೀಸರಿಗೆ ಚಾಕುವಿನಿಂದ ಇರಿದ ಆರೋಪಿ ಕಾಲಿಗೆ ಗುಂಡೇಟು !

0
447

ಶಿವಮೊಗ್ಗ: ರೌಡಿ ಶೀಟರ್ ಸಾಹಿಲ್ ಖುರೇಷಿಯನ್ನು ಪ್ರಕರಣ ಒಂದರಲ್ಲಿ ಇಂದು ಬೆಳಿಗ್ಗೆ ಬಂಧಿಸಲು ಸ್ಥಳಕ್ಕೆ ತೆರಳಿದ್ದ ಪೇಟೆ ಠಾಣೆ ಪೊಲೀಸರ ಮೇಲೆ ಏಕಾಏಕಿ ದಾಳಿ ಮಾಡಿ ಪೇದೆಯೋರ್ವರ ಎದೆಗೆ ಚಾಕುವಿನಿಂದ ಇರಿದು ಎಂಕೆಕೆ ರಸ್ತೆಯಿಂದ ಪರಾರಿಯಾಗಿದ್ದನು.

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪೇದೆಗಳಾದ ಗುರುನಾಯ್ಕ್ ಮತ್ತು ರಮೇಶ್ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿ ಶಾಹೀದ್ ಖುರೇಶಿ ಬೆನ್ನಟ್ಟಿದ್ದ ಪೊಲೀಸರು ಮಧ್ಯಾಹ್ನದ ವೇಳೆಗೆ ರಾಜೀವ್‌ಗಾಂಧಿ ಬಡಾವಣೆಯಲ್ಲಿ ಅರೆಸ್ಟ್ ಮಾಡಿದ್ದಾರೆ.

ಆರೋಪಿ ಖುರೇಷಿ ರಾಜೀವ್ ಗಾಂಧಿ ಬಡಾವಣೆಯಲ್ಲಿ ಬಂಧನದ ವೇಳೆಯೂ ಪೊಲೀಸರ ಮೇಲೆ ಲಾಂಗ್ ಬೀಸಿ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದು, ಆರೋಪಿಯನ್ನ ಮೆಗ್ಗಾನ್‌ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ದೊಡ್ಡಪೇಟೆ ಪೊಲೀಸರಿಂದ ತಪ್ಪಿಸಿಕೊಂಡು ಆರೋಪಿ ಖುರೇಷಿಯನ್ನು ನಾಲ್ಕು ಗಂಟೆಯ ಅವಧಿಯಲ್ಲಿ ಕೋಟೆ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯ ರಸ್ತೆಯಲ್ಲಿಯೇ ನಿಂತಿದ್ದಾಗ ಕೋಟೆ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಫೈರಿಂಗ್ ಮಾಡಿ ಹೆಡೆಮುರಿಕಟ್ಟಿದ್ದಾರೆ.

ರೌಡಿಶೀಟರ್‌ನಿಂದ ಹಲ್ಲೆಗೊಳಗಾದ ಪೊಲೀಸರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here