ಪೌರಕಾರ್ಮಿಕರನ್ನು ಖಾಯಂಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

0
256

ಚಿಕ್ಕಮಗಳೂರು: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಗಳ ಮಹಾ ಒಕ್ಕೂಟ ಸೋಮವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ರವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಪದಾಧಿಕಾರಿ ಗಳು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಶತಮಾನಗಳಿಂದ ಪೌರಕಾರ್ಮಿಕರಾಗಿ ಕೆಲಸವನ್ನು ನಿರ್ವಹಿಸಿಕೊಂಡು ಬರಲಾಗುತ್ತಿದ್ದು ಜಿಲ್ಲೆಯ ಕೇಂದ್ರ ಬಿಂದುವಾದಂತಹ ಚಿಕ್ಕಮಗಳೂರು ನಗರಸಭೆಯಲ್ಲಿ ಪೌರಕಾರ್ಮಿಕರನ್ನು ಇನ್ನೂ ಖಾಯಂ ಗೊಳಿಸಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದ್ದರಿಂದ ಪೌರಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರನ್ನು ಖಾಯಂಗೊಳಿಸ ಬೇಕು. ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳದೇ ಇದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಸಂಚಾಲಕರುಗಳಾದ ಯಲಗುಡಿಗೆ ಹೊನ್ನಪ್ಪ, ಕಬ್ಬಿಗೆರೆ ಮೋಹನ್‍ಕುಮಾರ್, ಆರದವಳ್ಳಿ ಮೋಹನ್, ಬೀಮ್‍ರಾವ್ ಕ್ಷೇಮಾಭಿವೃದ್ದಿ ಸಂಘದ ಮುರುಗೇಶ್, ದಸಂಸ ಮುಖಂಡರುಗಳಾದ ಗಂಗಾಧರ್, ಕೀರ್ತಿ, ಅರ್ಜುನ್, ಮಂಜುನಾಥ್, ವಿಜಯ್, ಸತೀಶ್ ಮತ್ತಿತರರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here