ಪೌರಕಾರ್ಮಿಕರನ್ನು ಖಾಯಂಗೊಳಿಸಿ ಆದೇಶ ; ಸಿಎಂಗೆ ಅಭಿನಂದನೆ

0
254

ಶಿಕಾರಿಪುರ : ರಾಜ್ಯ ಸರ್ಕಾರದ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ರವರು ಸೋಮವಾರ ರಾಜ್ಯದಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿನ ಅನೇಕ ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ಅಡಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಎಂದು ಆದೇಶ ಹೊರಡಿಸಿರುವುದು ಸಂತೋಷದ ವಿಷಯವಾಗಿದೆ ಎಂದು ಇಲ್ಲಿನ ಪುರಸಭೆ ಅಧ್ಯಕ್ಷೆ ರೇಖಾಬಾಯಿ ಹರ್ಷ ವ್ಯಕ್ತಪಡಿಸಿದರು.

ಪಟ್ಟಣದ ಸುದ್ದಿಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಲವು ವರ್ಷಗಳಿಂದಲೂ ನಗರಸಭೆ ಪಟ್ಟಣ ಪಂಚಾಯಿತಿ ಪುರಸಭೆಯ ಹಲವಾರು ಪೌರಕಾರ್ಮಿಕರು ತಮ್ಮ ಹುದ್ದೆಗಳನ್ನು ಖಾಯಂಗೊಳಿಸಲು ಅನೇಕ ಬಾರಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೌರಕಾರ್ಮಿಕರಿಗೆ ನ್ಯಾಯ ಒದಗಿಸುವ ಕೆಲಸ ನಡೆದಿದೆ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಇದಕ್ಕೆ ಪಟ್ಟಣದ ಪುರಸಭೆ ಅಧ್ಯಕ್ಷರಾದಿಯಾಗಿ ಎಲ್ಲಾ ಸದಸ್ಯರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರಿಗೆ ಪೌರಕಾರ್ಮಿಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಈ ಪೌರಕಾರ್ಮಿಕರಿಗೆ ಈಗ 17000 ರಿಂದ 28980 ರವರೆಗಿನ ವೇತನ ಶ್ರೇಣಿಯಲ್ಲಿ ಸೇವೆ ಸಲ್ಲಿಸುವಂತಹ ಅವಕಾಶ ಕಲ್ಪಿಸಲಾಗಿದೆ. ಈರೀತಿ ಪೌರಕಾರ್ಮಿಕರು ಖಾಯಂಗೊಂಡಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ. ಇದು ರಾಜ್ಯದಲ್ಲಿ ಹಲವು ಬಾರಿ ಹೋರಾಟ ನಡೆಸಿದ ಹಾಗೂ ಅನೇಕ ಪೌರಕಾರ್ಮಿಕರಿಗೆ ಸಂದ ಜಯವಾಗಿದೆ. ಇದರ ಪೂರ್ಣ ಫಲ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರವರ ಹಾಗೂ ಜಿಲ್ಲೆಯ ಸಂಸದರಾದ ಬಿ ವೈ ರಾಘವೇಂದ್ರ ರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಮಾಜಿ ಪುರಸಭಾ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ರೂಪಕಲಾ ಹೆಗಡೆ ಮಾತನಾಡಿ, ಪೌರಕಾರ್ಮಿಕ ನೌಕರರ ಮುಷ್ಕರ ಹಾಗೂ ಹೋರಾಟ ನಡೆಸಿದ ಫಲವಾಗಿ ಅವರಿಗೆ ನ್ಯಾಯ ಒದಗಿಸುವುದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಪೌರಕಾರ್ಮಿಕರಿಗೆ ನ್ಯಾಯ ಒದಗಿಸಿದ್ದಾರೆ ಅವರಿಗೆ ನಮ್ಮ ಧನ್ಯವಾದಗಳು. ಇದೇ ರೀತಿ ರಾಜ್ಯದಲ್ಲಿ ಈ ಸ್ವತ್ತು ಈಗಾಗಲೇ ಜ್ವಲಂತ ಸಮಸ್ಯೆಯಾಗಿದೆ ಮತ್ತು ಕಂದಾಯ ಭೂಮಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿರುವವರಿಗೂ ಕೂಡ ನೂರಾರು ರೀತಿಯ ತೊಂದರೆಯಾಗುತ್ತಿದೆ ಇವುಗಳಿಗೆ ಅತಿ ಶೀಘ್ರದಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಪುರಸಭಾ ಸದಸ್ಯರಾದ ಪಾಲಾಕ್ಷಪ್ಪ, ಪ್ರಶಾಂತ್ ಜೀನಹಳ್ಳಿ, ಲಕ್ಷ್ಮಿ ಮಹಾಲಿಂಗಪ್ಪ, ರಮೇಶ (ಗುಂಡ), ಸಿದ್ದಲಿಂಗಪ್ಪ,ಉಮಾಪತಿ, ಬೆಣ್ಣೆ ದೇವೇಂದ್ರಪ್ಪ ಸೇರಿದಂತೆ ಅನೇಕರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here