ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸುವವರೆಗೂ ರಾಜ್ಯ ಮಟ್ಟದಲ್ಲಿ ಅಸಹಕಾರ ಚಳುವಳಿ

0
254

ಚಿಕ್ಕಮಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ಸರ್ಕಾರ ಮುಖ್ಯವಾಗಿ ಪದವೀಧರ ಶಿಕ್ಷಕರ ಸಮಸ್ಯೆ ಬಗೆಹರಿಸಬೇಕು, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆಗೆ ಅವಕಾಶ ನೀಡಬೇಕು, ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಮುಖ್ಯ ಗುರುಗಳಿಗೆ ವಾರ್ಷಿಕವಾಗಿ 1,52,025 ವೇತನ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ಮೊದಲ ಹಂತದಲ್ಲಿ ಶಿಕ್ಷಕರಿಗೆ ನೀಡುವ ತರಬೇತಿ ಬಹಿಷ್ಕಾರ, ಕಪ್ಪುಪಟ್ಟಿ ಧರಿಸಿ ಶಾಲಾ ಶೈಕ್ಷಣಿಕ ಚಟುವಟಿಕೆ ನಿರ್ವಹಿಸಿ ಗಮನ ಸೆಳೆಯಲಾಗಿತ್ತು, ಮೂರನೇ ಹಂತದಲ್ಲಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟವನ್ನು ಮುಂದುವರಿಸುವುದಾಗಿ ಎಚ್ಚರಿಸಿದರು.

ಮುಂದಿನ ಹಂತದಲ್ಲಿ ಸರ್ಕಾರ ಸ್ಪಂದಿಸದಿದ್ದಲ್ಲಿ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಒಂದು ದಿನದ ಮಟ್ಟಿಗೆ ರಾಜ್ಯ ಮಟ್ಟದಲ್ಲಿ ಧರಣಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶ್, ಗೌರವ ಅಧ್ಯಕ್ಷ ಅಶೋಕ್, ಉಪಾಧ್ಯಕ್ಷ ಭೈರೇಗೌಡ, ಕೋಶಾಧ್ಯಕ್ಷ ಶ್ರೀನಿವಾಸ್, ಸಂಘಟನಾ ಕಾಯದರ್ಶಿ ವನಜಾಕ್ಷಿ, ಗೀತಾ, ಚಿತ್ರಾ, ಗಣೇಶ ಮೂರ್ತಿ, ತಾಲ್ಲೂಕು ಅಧ್ಯಕ್ಷ ಕಿರಣ್‌ಕುಮಾರ್, ಜಿಲ್ಲೆಯ ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರಾದ ಪುಟ್ಟರಾಜು, ಬಸಪ್ಪ, ರವಿ, ನಾಗರಾಜ್, ಕಲ್ಲೇಶಪ್ಪ, ಮಂಜುನಾಥ್, ನಂಜುಂಡಪ್ಪ, ಕಾರ್ಯದರ್ಶಿ ನವೀನ್, ಅಶೋಕ್, ಆನಂದ್, ರುದ್ರಪ್ಪ, ತಿಮ್ಮಪ್ಪ, ಷಣ್ಮಖರಾಜನ್, ನಟರಾಜ್ ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here