ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ

0
1100

ಸಾಗರ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಕಾರ್ಗಲ್ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕಾರ್ಗಲ್ ನ ಶಿವರಾಜ್ (23) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಚಾಲಕನಾಗಿದ್ದ ಶಿವರಾಜ್ ಅದೇ ಗ್ರಾಮದ ಯುವತಿಯನ್ನು ಒಂದು ವರ್ಷದಿಂದ ಪ್ರೀತಿಸಿದ್ದು, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ. ನಂತರ ಕೈಕೊಡಲು ಮುಂದಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here