ಬಂಧಿಸಲು ಹೋದ ಪೊಲೀಸ್ ಪೇದೆ ಎದೆಗೆ ಚಾಕು ಇರಿತ !

0
649

ಶಿವಮೊಗ್ಗ: ಇಲ್ಲಿನ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆಯ ಎದೆಗೆ ರೌಡಿಯೊಬ್ಬ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಶಾಹಿದ್ ಖರೇಷಿ ಎಂಬುವವನ್ನು ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಹಿಡಿಯಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ಒಂದರಲ್ಲಿ ಅರೆಸ್ಟ್ ಮಾಡಲು ತೆರಳಿದ್ದ ಇಬ್ಬರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪೇದೆ ಗುರುನಾಯಕ್ ಎದೆಗೆ ಚಾಕುವಿನಿಂದ ಚುಚ್ಚಿದ್ದಾನೆ ಎಂದು ತಿಳಿದುಬಂದಿದೆ.

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಾಹಿದ್ ತಕ್ಷಣ ಕೋಟೆ ಠಾಣೆಗೆ ಬಂದು ಶರಣಾಗಿದ್ದು, ಗಾಯಾಳು ಪೇದೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಎಸ್ಪಿ ಲಕ್ಷ್ಮೀಪ್ರಸಾದ್ ಭೇಟಿ ನೀಡಿ ಗಾಯಾಳು ಪೇದೆಯ ಆರೋಗ್ಯ ವಿಚಾರಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here