ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ಸರಿಪಡಿಸಲು ಸಿಎಂಗೆ ಮೂಲೆಗದ್ದೆ ಶ್ರೀಗಳ ಪತ್ರ

0
251

ರಿಪ್ಪನ್‌ಪೇಟೆ: ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ ನಾವು ಹೋರಾಟ ನಡೆಸುವುದು ಅನಿರ್ವಾಯವಾಗುತ್ತದೆಂದು ಎಚ್ಚರಿಸಿದ್ದಾರೆ.

ಬಸವಣ್ಣನವರು ಇಷ್ಟಲಿಂಗದ ಜನಕರಾಗಿದ್ದಾರೆ. ಅಲ್ಲಮಪ್ರಭು ಸೇರಿದಂತೆ ಎಲ್ಲ ಶರಣರು ತಮ್ಮ ವಚನಗಳಲ್ಲಿ ಇದನ್ನು ಉಲ್ಲೇಖಿಸಿದ್ದಾರೆ.ಬಸವಣ್ಣನ ಉದರಲ್ಲಿ ಹುಟ್ಟಿತ್ತು ಲಿಂಗ ಎಂದು ಚನ್ನಬಸವಣ್ಣನವರು ಉಲ್ಲೇಖಿಸಿದ್ದಾರೆ. ನಿನ್ನ ನಾ ನರಿಯದ ಮುನ್ನ ನೀನಲ್ಲೆ ಇದ್ದೆ? ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ ಎಂದು ಬಸವಣ್ಣನವರು ಸ್ವತಃ ತಮ್ಮ ವಚನದಲ್ಲಿ ಹೇಳಿದ್ದಾರೆ ಎಂದು ಸ್ಮರಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here