ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ; ಎಂ.ವಿಜಯ

0
356

ರಿಪ್ಪನ್‌ಪೇಟೆ: ಹೆಣ್ಣು ಎಂದರೆ ಸಾಧನೆಗೆ ಸ್ಪೂರ್ತಿ ಬದುಕಿಗೆ ದಾರಿ ಕುಟುಂಬಕ್ಕೆ ಶಕ್ತಿಯಾಗಿರುವ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಬಾಲ್ಯ ವಿವಾಹದಂತಹ ಪಿಡುಗಿನಿಂದಾಗಿ ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಸಂಕಷ್ಟ ಎದರಿಸುಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಹೊಸನಗರ ಶಿಶು ಕಲ್ಯಾಣಾಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಎಂ.ವಿಜಯ ವಿಷಾದ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕಛೇರಿಯ ಎದುರು ತಾಲ್ಲೂಕು ಶಿಶು ಕಲ್ಯಾಣಾಭಿವೃದ್ದಿ ಇಲಾಖೆ ಮತ್ತು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಆಯೋಜಿಸಲಾದ ಬಾಲ್ಯವಿವಾಹ ನಿಷೇಧದ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಿರು ಚಿತ್ರ ಪ್ರದರ್ಶನವನ್ನು ನಡೆಸಿ ಮಕ್ಕಳಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತವಾಗಿ ಅವರ ಹಕ್ಕುಗಳಾದ ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಅಭಿವೃದ್ದಿ ಹೊಂದುವ ಹಕ್ಕು, ಭಾಗವಹಿಸುವ ಹಕ್ಕು, ಉಲ್ಲಂಘನೆಯಾಗುತ್ತದೆಂದು ತಿಳಿದಿರುವುದರಿಂದ ಬಾಲ್ಯ ವಿವಾಹ ಮುಕ್ತ ಸಮಾಜವನ್ನು ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಜಿ.ಚಂದ್ರಶೇಖರ್, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯರು, ಶ್ರೀಶಾ, ಅಂಗನವಾಡಿ ಆರ್.ಎಸ್.ಯಶೋಧ ಬಾಲ್ಯ ವಿವಾಹದಿಂದ ಆಗುವ ಅನಾಹುತಗಳ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಆಡಳಿತ ವರ್ಗ, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿವರ್ಗ ಮತ್ತು ಶಾಲಾ ವಿದ್ಯಾರ್ಥಿಗಳು ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರರು ಹಾಜರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here