ಬಿಜೆಪಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷದ ಬಗ್ಗೆ ಏನನ್ನು ಬಯಲು ಮಾಡಲು ಸಾಧ್ಯವಾಗಿಲ್ಲ ; ಸಿದ್ದರಾಮಯ್ಯ

0
271

ಚಿಕ್ಕಮಗಳೂರು : ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದರೂ ಕಾಂಗ್ರೆಸ್ ಪಕ್ಷದ ಬಗ್ಗೆ ಏನನ್ನು ಬಯಲು ಮಾಡಲು ಸಾಧ್ಯವಾಗಿಲ್ಲ ಎಂದು ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ

ಕಾಂಗ್ರೆಸ್ ಹಗರಣವನ್ನು ಜನರ ಮುಂದೆ ಇಡಬೇಕಾಗುತ್ತದೆ ಎಂದು ಸಿಎಂ ಬೊಮ್ಮಾಯಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ರಾಜ್ಯ- ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ ಎಂದರು.

ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದು, ಬಿಜೆಪಿಯವರಿಗೆ ಸಮರ್ಥನೆ ಮಾಡಿಕೊಳ್ಳಲು ಯಾವುದೇ ವಿಚಾರಗಳಿಲ್ಲ ಎಂದು ಹೇಳಿದರು.

ಈಶ್ವರಪ್ಪ 40 ಪರ್ಸೆಂಟ್ ಡಿಮ್ಯಾಂಡ್ ಮಾಡದಿದ್ದರೆ ರಾಜೀನಾಮೆ ಯಾಕೆ ಕೊಡುತ್ತಿದ್ದರು.? ಹೈಕಮಾಂಡ್ ಯಾಕೆ ಈಶ್ವರಪ್ಪನವರ ರಾಜೀನಾಮೆ ಪಡೆಯುತ್ತಿತ್ತು? ಎಂದು ಪ್ರಶ್ನಿಸಿದರು.

ಡಿವೈಎಸ್ಪಿ ಗಣಪತಿ-ಸಂತೋಷ್ ಪಾಟೀಲ್ ಪ್ರಕರಣವನ್ನು ಹೋಲಿಕೆ ಮಾಡಲು ಆಗುವುದಿಲ್ಲ. ಸಚಿವ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿತ್ತು ಸಿಬಿಐ ಯಾರ ವಶದಲ್ಲಿದೆ ಎಂದು ಕೇಳಿದರು.

ಜಾಹಿರಾತು

LEAVE A REPLY

Please enter your comment!
Please enter your name here