ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ರಾಹುಲ್ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ, ಪ್ರತಿಕೃತಿ ದಹನ

0
423

ಹೊಸನಗರ: ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯ ರಾಜಾಧ್ಯಕ್ಷ ನಳಿಲ್ ಕುಮಾರ್ ಕಟೀಲ್ ರವರು ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದು ಇವರ ವಿರುದ್ಧ ಹೊಸನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜಿ.ನಾಗರಾಜ್‌ರವರ ನೇತೃತ್ವದಲ್ಲಿ ಪಟ್ಟಣದ ಬಸ್ ಸ್ಟ್ಯಾಂಡ್ ಬಳಿ ಪ್ರತಿಭಟಿಸಿ ನಳಿಲ್ ಕುಮಾರ್ ಕಟೀಲ್ ರವರ ಪ್ರತಿಕೃತಿ ದಹನ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಮೌಳಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಎರಗಿ ಉಮೇಶ್, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಶ್ವಿನಿಕುಮಾರ್, ಸಣ್ಣಕ್ಕಿ ಮಂಜು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ್, ಹೆಚ್ ಮಹಾಬಲರಾವ್, ಕೋಡೂರು ವೇದಾಂತಪ್ಪ ಗೌಡ, ಮಂಜುನಾಥ್, ಬೃಂದಾವನ ಪ್ರವೀಣ್, ಸುಧಾ, ಮಹೇಂದ್ರ, ನಾಸೀರ್, ಕೃಷ್ಣಮೂರ್ತಿ, ಚಂದ್ರಮೂರ್ತಿ, ಅಣ್ಣಪ್ಪ, ರಾಜು, ಟೀಕಪ್ಪ, ಜಯನಗರ ಗುರು, ಉಬೇದುಲ್ಲ, ಸಾಮಾಜಿಕ ಜಾಲತಾಣದ ತಾಲೂಕು ಅಧ್ಯಕ್ಷ ಚೇತನ್‌ದಾಸ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here