ಬಿಜೆಪಿ ಶಕ್ತಿ ಕೇಂದ್ರಗಳಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವಂತಾಗಲಿ: ಸಿ.ಟಿ ರವಿ

0
68

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಣ್ಣ ಜನರ ದೊಡ್ಡ ಕೆಲಸವನ್ನು ಗುರುತಿಸಿ ಅಭಿನಂದಿಸುವ ಕಾರ್ಯಗಳಾಗಬೇಕು ಎಂದು ಶಾಸಕ ಸಿ.ಟಿ. ರವಿ ಹೇಳಿದರು.

ನಗರದ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಜನಸ್ವರಾಜ್ ಯಾತ್ರೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂಬಂಧ ಬಿಜೆಪಿ ಪ್ರಮುಖರು, ಹಾಗೂ ಪ್ರಭಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಡಿಸೆಂಬರ್ 25ರಂದು ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ. ಉತ್ತಮ ಆಡಳಿತ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೊಡ್ಡವರು ಮಾಡಿದ ಸಣ್ಣ ಕೆಲಸಗಳನ್ನು ದೊಡ್ಡದಾಗಿ ಪ್ರಚಾರ ನೀಡಿ ಬಿಂಬಿಸಲಾಗುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಣ್ಣ ಮಟ್ಟದಲ್ಲಿ ಎಲೆಮರೆ ಕಾಯಿಯಂತೆ ಇದ್ದು ದೊಡ್ಡ ಸಾಧನೆ ಮಾಡಿದ ಹಾಜಬ್ಬ, ಮಂಜಮ್ಮಜೋಗತಿ ಸೇರಿದಂತೆ ಅನೇಕ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯ ಮಾಡುತ್ತಿದೆ. ಅದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರಗಳಲ್ಲಿ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕೆಲಸವಾಗಬೇಕಿದೆ ಎಂದು ಸಲಹೆ ನೀಡಿದರು.

ನವೆಂಬರ್ 13 ರಂದು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಗ್ರಾಮಪಂಚಾಯಿತಿಗಳ ಸದಸ್ಯರನ್ನು ಸಂಘಟಿಸಿ. ನ. 18 ಜನಸ್ವರಾಜ್ ಯಾತ್ರೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಂಘಟಿತರಾಗಬೇಕು. ಬೂತ್ ಮಟ್ಟದಲ್ಲಿ ಮತದಾರರ ಪಟ್ಟಿಯಲ್ಲಿ ಅನಧೀಕೃತವಾಗಿ ಸೇರ್ಪಡೆಗೊಂಡಿರುವವರನ್ನು ತೆಗೆದು ಹಾಕಿ, ಅಧೀಕೃತವಾದವರು, ಪಟ್ಟಿಯಲ್ಲಿ ಹೆಸರು ಇಲ್ಲದವರನ್ನು ಸೇರ್ಪಡೆಗೊಳಿಸುವ ಕಾರ್ಯವಾಗಬೇಕಿದೆ. ಬಿಜೆಪಿ ಬೆಂಬಲಿತ 1400 ಕ್ಕೂ ಗ್ರಾ.ಪಂ ಸದಸ್ಯರಿದ್ದು ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಗೆಲ್ಲುವ ವಿಶ್ವಾಸವಿದೆ ಎಂದರು.

ಜಾಹಿರಾತು

LEAVE A REPLY

Please enter your comment!
Please enter your name here